ಪೌರಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ

KannadaprabhaNewsNetwork |  
Published : May 31, 2025, 01:38 AM IST
ಫೋಟೋ , 30ಎಚ್‌ಎಸ್‌ಡಿ3:  ಮುಷ್ಕರ ನಿರತ ಪೌರ ಕಾರ್ಮಿಕರನ್ನುದ್ದೇಶಿಸಿ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಮುಷ್ಕರ ನಿರತ ಪೌರ ಕಾರ್ಮಿಕರನ್ನುದ್ದೇಶಿಸಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ಕಾರ್ಮಿಕರು 4 ದಿನಗಳಿಂದ ನಡೆಸುತ್ತಿರುವ ಮುಷ್ಕರ

ನ್ಯಾಯಯುತವಾಗಿದೆ. ವಿಧಾನಸಭೆಯಲ್ಲಿ ಚರ್ಚಿಸುವಂತೆ ಬಿಜೆಪಿ ನಾಯಕರಲ್ಲಿ ಮನವಿ ಮಾಡುವುದಾಗಿ ಶಾಸಕ

ಜಿ.ಎಚ್.ತಿಪ್ಪಾರೆಡ್ಡಿ ಧರಣಿ ನಿರತರಿಗೆ ಭರವಸೆ ನೀಡಿದರು.

ನಗರಸಭೆ ಮುಂಭಾಗ ಪೌರಕಾರ್ಮಿಕರು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು,

ಪೌರ ಕಾರ್ಮಿಕರು, ವಾಲ್‍ಮನ್‍ಗಳು, ನೀರು ಸರಬರಾಜುದಾರರು, ಚಾಲಕರು, ಪೌರನೌಕರರು ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಯಾರೆ ಆಗಿರಬಹುದು. ರಾಜಕೀಯ ಮಾಡಬಾರದು. ರೋಗ ರುಜಿನಗಳಿಗೆ ಸುಲಭವಾಗಿ ತುತ್ತಾಗುವಂತ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು. ದಲಿತರು, ಬಡವರ ಪರ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು ಪೌರ ಕಾರ್ಮಿಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ವಿನಂತಿಸಿದರು.

ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಪೌರ ಕಾರ್ಮಿಕರು ಕೆಲಸ ಮಾಡಿದ್ದಾರೆ. ಬಿಬಿಎಂಪಿಯಲ್ಲಿನ ಪೌರ

ಕಾರ್ಮಿಕರ ಸೇವೆಯನ್ನು ಹೇಗೆ ಖಾಯಂಗೊಳಿಸಲಾಗಿದೆಯೋ ಅದೆ ರೀತಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ

ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರ ಸೇವೆ ಖಾಯಂಗೊಳಿಸಿ ಜೀವನಕ್ಕೆ ಭದ್ರತೆ

ಒದಗಿಸಲಿ ಎಂದು ಜಿ.ಎಚ್.ತಿಪ್ಪಾರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇಎಸ್ಐಪಿಎಫ್ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳು ಪೌರ ಕಾರ್ಮಿಕರಿಗೆ ಸಿಗಬೇಕು. ಹೊರಗುತ್ತಿಗೆ ಮೂಲಕ

ನೇಮಕಾತಿ ಮಾಡುವುದನ್ನು ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಂಡು ಸರ್ಕಾರದಿಂದಲೆ ವೇತನ ಪಾವತಿಸಬೇಕೆಂದರು.

ನಗರಸಭೆ ಸದಸ್ಯ ಶ್ರೀನಿವಾಸ್, ಹರೀಶ್, ದೀಪು, ನಾಮ ನಿರ್ದೇಶಕ ಸದಸ್ಯ ಕೃಷ್ಣ ಇನ್ನು ಅನೇಕರು ಈ

ಸಂದರ್ಭದಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ