ಒಳಮೀಸಲಾತಿ ಜಾರಿಗೆ ತರಲು ಹೋರಾಟ ಸಮಿತಿ ಆಗ್ರಹ

KannadaprabhaNewsNetwork |  
Published : Aug 02, 2025, 12:00 AM IST
1ಎಚ್‌ವಿಆರ್4- | Kannada Prabha

ಸಾರಾಂಶ

ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಮಾತನಾಡಿ, ಈ ಅಸಮಾನತೆಯನ್ನು ಸರಿಪಡಿಸಲು, 2024 ಆ. 1ರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ ಎಂದರು.

ಹಾವೇರಿ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಒಳ ಮೀಸಲಾತಿಯ ಬೇಡಿಕೆ ಈಡೇರಿಕೆಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಶೀಘ್ರವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಮಾತನಾಡಿ, ಈ ಅಸಮಾನತೆಯನ್ನು ಸರಿಪಡಿಸಲು, 2024 ಆ. 1ರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.

ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.ಮುಖಂಡ ಪರಮೇಶ್ವರಪ್ಪ ಮೇಗಳಮನಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯವನ್ನು ಒದಗಿಸಿವೆ. ನಾಗಮೋಹನ್ ದಾಸ್ ಆಯೋಗಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರು ತಿಂಗಳಾದರೂ ಸರಿಯಾದ ಮಾಹಿತಿಗಳು ಆಯೋಗಕ್ಕೆ ಬಂದಿಲ್ಲ. ಸರ್ಕಾರ ಕುಂಟುನೆಪ ಹೇಳದೇ ಶೀಘ್ರವಾಗಿ ಒಳಮೀಸಲಾತಿ ಮಾಡಲು ಮುಂದಾಗಬೇಕು ಎಂದರು.ರಾಜ್ಯ ಸಂಘಟನಾ ಸಂಚಾಲಕ ಉಡಚಪ್ಪ ಮಾಳಗಿ ಹಾಗೂ ಜಿಲ್ಲಾಧ್ಯಕ್ಷ ನಾಗರಾಜ ಮಾಳಗಿ ಮಾತನಾಡಿ, ಸರ್ಕಾರ ಆ. 15ರೊಳಗಾಗಿ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಎಂದು ಎಚ್ಚರಿಸಿದರು.ಮುಖಂಡರಾದ ಹೊನ್ನಪ್ಪ ತಗಡಿನಮನಿ, ನೀಲಕಂಠಪ್ಪ ಕುಸನೂರ, ಪ್ರಕಾಶ ಪೂಜಾರ, ಅಶೋಕ ಮರೆಣ್ಣನವರ, ತಿರಕಪ್ಪ ಚಿಕ್ಕೇರಿ, ಬಿ.ಆರ್. ಪುಟ್ಟಣ್ಣನವರ, ಸುಭಾಷ ಬೆಂಗಳೂರು, ಸಂತೋಷ ಗುಡ್ಡಪ್ಪನವರ, ಕರಿಯಪ್ಪ ಕಟ್ಟಿಮನಿ, ಮಲ್ಲೇಶ ಕುನ್ನೂರ ಮಾತನಾಡಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾಲತೇಶ ಯಲ್ಲಾಪುರ, ಜಗದೀಶ ಹರಿಜನ, ಸುರೇಶ ಆಶಾದಿ, ಕೃಷ್ಣ ಕರ್ಜಗಿ, ಮಲ್ಲೇಶ ಕಡಕೋಳ, ಮಹೇಶ ಹರಿಜನ, ಸುಭಾಸ ಮಾಳಗಿ, ಸುನೀಲ ಬೇಟಗೇರಿ, ರಾಜು ಹರಿಜನ, ರೇಣುಕಾ ಬಡಕ್ಕಣ್ಣನವರ, ಹನುಮಂತಪ್ಪ ಸಿ.ಡಿ., ಸುಮಂಗಲಾ ಕೃಷ್ಣಾಪುರ, ಮಾರುತಿ ಬಣಕಾರ, ಗೀತಾ ಒಳಗುಂಡಿ, ಗೀತಾ ಕಡೇಮನಿ, ನೇತ್ರಾ ದೊಡ್ಡಮನಿ, ಗೀತಾ ಹರಿಜನ, ನಾಗರಾಜ ಬಣಕಾರ, ಮಹೇಶಪ್ಪ ಹರಿಜನ, ಯಲ್ಲಮ್ಮ ಕೊಪ್ಪದ, ನಾಗರಾಜ ಹಾವನೂರ, ಶೇಕಣ್ಣ ದಂಡಿನ, ಮಾಲತೇಶ ಹಲಬಗೊಂಡ, ಗುಡ್ಡಪ್ಪ ಬಣಕಾರ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ