-ರೈತರ ಹೋರಾಟಕ್ಕೆ ಮಣಿದ ಸರ್ಕಾರ । ಬಸವಸಾಗರದಿಂದ 3 ದಿನಗಳ ನೀರು ಬಿಡುಗಡೆಗೆ ಆದೇಶ
--
ಕನ್ನಡಪ್ರಭ ವಾರ್ತೆ ಯಾದಗಿರಿನಾರಾಯಣಪುರದ ಬಸವ ಸಾಗರ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ, ಕಳೆದ 14 ದಿನಗಳಿಂದ ಜಿಲ್ಲೆಯ ಶಹಾಪುರ, ಹುಣಸಗಿ ಭಾಗದಲ್ಲಿ ನಿರಂತರ ನಡೆಯುತ್ತಿದ್ದ ರೈತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ನಾರಾಯಣಪುರದ ಬಸವಸಾಗರ ಡ್ಯಾಂನಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಮೂರು ದಿನಗಳ ಕಾಲ 1.5 ಟಿಎಂಸಿ ನೀರು ಹರಿಸಲು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಅಧಿಕೃತ ಆದೇಶದಂತೆ ನ.24, 25, 26 ರವರೆಗೆ ಮೂರು ದಿನಗಳ ಕಾಲ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಎಡದಂಡೆ ಕಾಲುವೆಗೆ 4,000 ಕ್ಯೂಸೆಕ್, ಬಲದಂಡೆ ಕಾಲುವೆಗೆ 1,000 ಕ್ಯೂಸೆಕ್ ಸೇರಿದಂತೆ ದಿನಕ್ಕೆ 5,000 ಕ್ಯೂಸೆಕ್ ನೀರನ್ನು ಲಘು ಬೆಳೆಗಳಿಗೆ ಹರಿಸಲಾಗುತ್ತಿದೆ. ಕೃಷ್ಣಾ ಭಾಗ್ಯ ಜಲ ನಿಗಮದ (ಕೆಬಿಜೆಎನ್ಎಲ್) ಅಧಿಕಾರಿಗಳು ಈಗಾಗಲೇ ಗೇಟ್ ಓಪನ್ ಮಾಡಿ, ನ.26ರವರೆಗೆ ದಿನನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿದ್ದಾರೆ. 14 ದಿನಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಭೀಮರಾಯನಗುಡಿಯ ಕೆಬಿಜೆಎನ್ಎಲ್ ಕಚೇರಿ ಮುಂಭಾಗದಲ್ಲಿ ಕಳೆದ 14 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರು. ರೈತ ಮುಖಂಡರುಗಳಾದ ಚೆನ್ನಪ್ಪ ಆನೆಗುಂದಿ, ಮಲ್ಲಿಕಾರ್ಜುನ ಸತ್ಯಂಪೇಟೆ, ಲಕ್ಷ್ಮಿಕಾಂತ ಪಾಟೀಲ, ಶರಣು ಮಂದಾರವಾಡ ಸೇರಿದಂತೆ ಅನೇಕ ರೈತ ಮುಖಂಡರುಗಳ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳು ಹೋರಾಟ ನಡೆಸಿದ್ದವು.
ವಿವಿಧ ಮಠಾಧೀಶರು ಸೇರಿದಂತೆ ರಾಜಕೀಯ ಮುಖಂಡರುಗಳು ಪಕ್ಷಾತೀತವಾಗಿ ರೈತರ ಹೋರಾಟಕ್ಕೆ ದನಿಗೂಡಿಸಿದ್ದರು.
..ಕೋಟ್..
- ಚೆನ್ನಪ್ಪ ಆನೆಗುಂದಿ, ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ, ಶಹಾಪುರ.
ನಾರಾಯಣಪುರದ ಬಸವಸಾಗರ ಡ್ಯಾಂನಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಮೂರು ದಿನಗಳ ಕಾಲ 1.5 ಟಿಎಂಸಿ ನೀರು ಹರಿಸಲು ಸರ್ಕಾರ ಆದೇಶಿಸಿದ್ದರಿಂದ, ಕಾಲುವೆಗಳಿಗೆ ನೀರು ಹರಿಸಲಾಯಿತು.
25ವೈಡಿಆರ್6 : ನಾರಾಯಣಪುರದ ಬಸವಸಾಗರ ಡ್ಯಾಂನಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಮೂರು ದಿನಗಳ ಕಾಲ 1.5 ಟಿಎಂಸಿ ನೀರು ಹರಿಸಲು ಸರ್ಕಾರ ಆದೇಶಿಸಿದ್ದರಿಂದ, ಜಲಾಶಯದ ಮೂಲಕ ಕಾಲುವೆಗಳಿಗೆ ನೀರು ಹರಿಸಲಾಯಿತು.
-25ವೈಡಿಆರ್7: 14 ದಿನಗಳ ಕಾಲ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿ, ರೈತ ಮುಖಂಡ ಲಕ್ಷ್ಮೀಕಾಂತ ಪಾಟೀಲರಿಗೆ ಹೋರಾಟ ಸ್ಥಳದಲ್ಲಿಯೇ ಕ್ಷೀರಾಭಿಷೇಕ ಮಾಡಿ ರೈತರು ಸಂಭ್ರಮಿಸಿದರು.