ಕನ್ನಡಪ್ರಭ ವಾರ್ತೆ ಬೆಳಗಾವಿ
ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ₹ 14 ಸಾವಿರ ದಿಂದ ₹ 30 ಸಾವಿರದವರೆಗೆ ನಿಗದಿಪಡಿಸುವುದು. ಜೊತೆಗೆ ಗೌರವಧನದ ವರ್ಷದ 12 ತಿಂಗಳು ನೀಡಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ಅತಿಥಿ ಉಪನ್ಯಾಸಕರಿಗೆ ವಾರಕ್ಕೆ 10 ರಿಂದ 12 ಗಂಟೆಗಳ ಕಾರ್ಯಭಾರ ಮಾತ್ರ ನೀಡುವುದು. ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೆರಿಗೆ ರಜೆ ಸೇರಿದಂತೆ ಸರ್ಕಾರಿ ಮಹಿಳಾ ನೌಕರರ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಾರ್ಯಭಾರ ಕಡಿಮೆಯಿರುವ ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ನಿಯೋಜಿಸುವ ಅವೈಜ್ಞಾನಿಕ ಪದ್ಧತಿಯನ್ನು ರದ್ದುಗೊಳಿಸಬೇಕು. ರಾಜ್ಯದ 16 ಜಿಲ್ಲೆಗಳ ಆದರ್ಶ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳು ಕ್ರಮಬದ್ಧ ವೇತನ ಪಾವತಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪದ್ಮಪ್ರಭ ಇಂದ್ರ, ರಾಜೇಶ ಭಟ್, ಎಸ್.ಜಿ.ನಾಗರತ್ನ, ಅಶ್ವಿನಿ ಕೆ.ಎಸ್., ಶಂಕರ ಪೂಜಾರಿ, ಸದಾಶಿವ ಮುರುಗೋಡ ಸೇರಿದಂತೆ ಇತರರಿದ್ದರು.