ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ

KannadaprabhaNewsNetwork |  
Published : Aug 08, 2024, 01:34 AM IST
7ಕೆಎಂಎನ್ ಡಿ28 | Kannada Prabha

ಸಾರಾಂಶ

ಕಾಡಿನಿಂದ ನಾಡಿನತ್ತ ಬಂದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ ಮುಂದುವರೆದಿದೆ. ಮಂಗಳವಾರ ಶ್ರೀರಾಮನಗರ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ರಾತ್ರಿ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಕೇವಲ 8 ಕಿ.ಮೀ ವರೆಗೆ ಓಡಿಸಲು ಮಾತ್ರ ಸಾಧ್ಯವಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾಡಿನಿಂದ ನಾಡಿನತ್ತ ಬಂದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ ಮುಂದುವರೆದಿದೆ.

ಮಂಗಳವಾರ ಶ್ರೀರಾಮನಗರ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ರಾತ್ರಿ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಕೇವಲ 8 ಕಿ.ಮೀ ವರೆಗೆ ಓಡಿಸಲು ಮಾತ್ರ ಸಾಧ್ಯವಾಗಿದೆ.

ಆನೆಗಳನ್ನು ತಾಲೂಕಿನ ಹನಿಯಂಬಾಡಿ, ಚೀರನಹಳ್ಳಿ, ಹಳುವಾಡಿ ಮಾರ್ಗವಾಗಿ ಪುರ ಗ್ರಾಮದವರೆಗೆ ಓಡಿಸಲು ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆನೆಗಳನ್ನು ಕಾಡಿಗಟ್ಟುವ ಮಾರ್ಗ ಮಧ್ಯೆ ರೈತರ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬು, ತರಕಾರಿ ಬೆಳೆಗಳನ್ನು ನಾಶ ಮಾಡಿವೆ.

ಹಳುವಾಡಿ ಗ್ರಾಮದ ಕಡ್ಡಿಪುಡಿ ಉಮೇಶ್ ಅವರ ತರಕಾರಿ ಬೆಳೆ, ದೂದಿ ಬಸವರಾಜು ಅವರ ಕಬ್ಬಿನ ಗದ್ದೆಯಲ್ಲಿ ಬೆಳೆ ತಿದ್ದು ನಾಶ ಮಾಡಿವೆ. ಪುರ ಗ್ರಾಮದಲ್ಲಿರುವ ಗುಂಡೇಗೌಡ - ಕೃಷ್ಣೇಗೌಡರ ಜಮೀನು ಸೇರಿದಂತೆ ಸುತ್ತಮುತ್ತಲಿನ ರೈತರು ಬೆಳೆದಿದ್ದ ಕಬ್ಬುಗಳನ್ನು ನಾಶ ಮಾಡಿವೆ.

ಬುಧವಾರ ಸಂಜೆಯಿಂದ ಕಾಡಾನೆಗಳನ್ನು ಮಳವಳ್ಳಿ ಮಾರ್ಗವಾಗಿ ಹಲಗೂರು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ.ಇಂದು ವಿದ್ಯುತ್ ವ್ಯತ್ಯಯ

ಮಂಡ್ಯ:ತಾಲೂಕಿನ ವಿ.ಸಿ.ಫಾರ್ಮ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.8ರಂದು ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿ.ಸಿ.ಫಾರ್ಮ್, ಶಿವಳ್ಳಿ, ದುದ್ದ, ಬಿ.ಹಟ್ನ, ಬೇವಕಲ್ಲು, ಹುಲಿಕೆರೆ, ಚಂದಗಾಲು, ಹುಲ್ಲೇನಹಳ್ಳಿ, ಹೊಳಲು ಹಾಗೂ ಈ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮಂಡ್ಯ ಸೆಸ್ಕ್, ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಆಗಸ್ಟ್ 13ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ

ಮಂಡ್ಯ: ಜಿಲ್ಲಾ ಪಂಚಾಯ್ತಿಯ 2024-25 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು (20 ಅಂಶಗಳ ಕಾರ್ಯಕ್ರಮವು ಸೇರಿದಂತೆ) ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಆಗಸ್ಟ್ 13 ರಂದು ಬೆಳಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ತಿಳಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ