ಕನ್ನಡಪ್ರಭ ವಾರ್ತೆ ನಾಪೋಕ್ಲು
ಹೊದ್ದೂರು ಗ್ರಾಮದ ಪೆಂಗೋಳಿ ಎಂಬಲ್ಲಿ ಕಳೆದ ಏಳು ದಿನಗಳಿಂದ ಚಳಿ, ಮಳೆ, ಗಾಳಿ ಲೆಕ್ಕಿಸದೆ ಟೆಂಟ್‌ನಲ್ಲಿ ವಾಸವಿದ್ದು, ಸರ್ಕಾರಿ ಜಾಗದಲ್ಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಕುಟುಂಬ ಹಾಗೂ ಹೋರಾಟ ಸಮಿತಿ ಪದಾಧಿಕಾರಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರ ಏಳನೇ ದಿನಕ್ಕೆ ಕಾಲಿರಿಸಿತು.
ಹೊದ್ದೂರು ಗ್ರಾಮದಲ್ಲಿ 800ಕ್ಕೂ ಅಧಿಕ ನಿರಾಶ್ರಿತ ಬಡ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇನ್ನಿತರ ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಸರ್ಕಾರಿ ಕಂದಾಯ ಭೂಮಿಯನ್ನು ಭೂ ಮಾಲೀಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಆರೋಪವಿದೆ. ಇಲ್ಲಿ ಇದುವರೆಗೂ ಬಡವರಿಗೆ ನಿವೇಶನ ಸರ್ಕಾರ ನೀಡಲು ಮುಂದಾಗಿರುವುದಿಲ್ಲ. ಹೊದ್ದೂರು ಗ್ರಾಮದ ಸರ್ವೆ ನಂ. 53/10, 49/3 ಮತ್ತು 88/4 ರಲ್ಲಿ ನಿವೇಶನ ಕಲ್ಪಿಸಿ ಕೊಡುವಂತೆ ಹೋರಾಟದ ಮುಂದಾಳತ್ವ ವಹಿಸಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ, ಹೊದ್ದೂರು ಪಂಚಾಯಿತಿ ಸದಸ್ಯ ಕೆ.ಮೊಣ್ಣಪ್ಪ ಶುಕ್ರವಾರ ಒತ್ತಾಯಿಸಿದರು.ಹೊದ್ದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಎಚ್‌ಎಸ್ ಭೋಜ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಕಿರಣ್,
ಸಮಸ್ಯೆ ಬಗ್ಗೆ ಹರಿಸುವ ನಿಟ್ಟಿನಲ್ಲಿ ಗುರುವಾರ ಕಂದಾಯ ಇಲಾಖೆ ವತಿಯಿಂದ ಸರ್ವೆ ಮಾಡಲಾಗಿದ್ದು ದಾಖಲೆ ದೊರಕಬೇಕಾಗಿದೆ. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಿ ಕೊಡಬೇಕು ಎಂದು ಮನವಿ ಮಾಡಿದರು.