ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ ಮನವಿ
ಕನ್ನಡಪ್ರಭ ವಾರ್ತೆ, ಕಡೂರುಕಡೂರಿನಲ್ಲಿ ಆಯೋಜಿಸಲಾಗಿರುವ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹೊಸೂರು ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ಸಮ್ಮೆಳನ ಯಶಸ್ವಿಯಾಗಿ ನಡೆಯಲು ತಾಲೂಕಿನ ಎಲ್ಲ ಕನ್ನಡದ ಮನಸುಗಳು ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ ಮನವಿ ಮಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಮ್ಮೇಳನದ ಅಧ್ಯಕ್ಷರಾದ ಹೊಸೂರು ಪುಟ್ಟರಾಜು ಅವರನ್ನು ಅವರ ನಿವಾಸದಲ್ಲಿ ಸಾಹಿತ್ಯ ಪರಿಷತ್ತಿನ ಸ್ವಾಗತ ಸಮಿತಿಯಿಂದ ಗೌರವ ಸಲ್ಲಿಸಿ ಸಾಂಪ್ರದಾಯಿಕವಾಗಿ ಆಹ್ವಾನಿಸಲಾಯಿತು. ಬಳಿಕ ಸೂರಿ ಶ್ರೀನಿವಾಸ್ ಮಾತನಾಡಿ ಕಡೂರಿನಲ್ಲಿ ನಡೆಯುವ ತಾಲೂಕು ಸಮ್ಮೇಳನಕ್ಕೆ ಹೊಸೂರು ಪುಟ್ಟರಾಜು ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಿಕೊಂಡಿದ್ದು ಅವರ ಸಾಹಿತ್ಯದ ಆಸಕ್ತಿ, ವಚನ ಸಾಹಿತ್ಯ, ಸೃಜನಶೀಲ ಸಾಹಿತ್ಯದಲ್ಲಿ ಹೆಸರಾದ ಅವರು ಅತ್ಯಂತ ಸರಳ ವ್ಯಕ್ತಿತ್ವ ಉಳ್ಳವರು ಎಂಬುದು ಹೆಮ್ಮೆಯ ವಿಚಾರ.ಇವರು ಕಡೂರು ತಾಲೂಕಿನ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಇವರ ಅಧ್ಯಕ್ಷತೆಯಲ್ಲಿ ಕಡೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ತಾಲೂಕಿನ ಎಲ್ಲ ಕನ್ನಡದ ಮನಸುಗಳು ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ತಾಲೂಕು ಕಸಾಪ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ಮಾತನಾಡಿ, ಕನ್ನಡ ನಾಡು ನುಡಿ ನೆಲ ಜಲ ಹಾಗೂ ಇವುಗಳ ಸಂರಕ್ಷಣೆ ಯಲ್ಲಿ ಹೊಸೂರು ಪುಟ್ಟರಾಜು ಅವರ ಪಾತ್ರ ಹಿರಿದಾಗಿದೆ. ಅಜ್ಜಂಪುರ ಜಿ. ಸೂರಿಯವರ ಕಾಲದಿಂದಲೂ ಸಾಹಿತ್ಯ ಮತ್ತು ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ ಇವರನ್ನು ಸಮ್ಮೇಳನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲು ಸಹಕರಿಸಿದ ತಮಗೆಲ್ಲರಿಗೂ ಅಭಿನಂದನೆಗಳು ಎಂದರು. ಸಮ್ಮೇಳನ ಅಧ್ಯಕ್ಷ ಹೊಸೂರು ಪುಟ್ಟರಾಜು ಮಾತನಾಡಿ, ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಅದಕ್ಕಾಗಿ ನಾನು ಧನ್ಯವಾದಗಳನ್ನು ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಸೇರಿದಂತೆ ಎಲ್ಲ ಪದಾಧಿಕಾರಿಗಳಿಗೆ ಅರ್ಪಿಸುವುದಾಗಿ ಹೇಳಿದರು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಚ್ ಎಂ ಲೋಕೇಶ್, ಹಿರಿಯ ಕಸಾಪ ಸದಸ್ಯರಾದ ಬಿ ಶಿವಕುಮಾರ್ , ಎಸ್ ಪರಮೇಶ್ , ಬಿ ಪ್ರಕಾಶ್ ಕಸಾಪ ಮಾಜಿ ಅಧ್ಯಕ್ಷ ಕೆ.ಜಿ. ಶ್ರೀನಿವಾಸ್ ಮೂರ್ತಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಸತ್ಯನಾರಾಯಣ, ಸೀತಾಲಕ್ಷ್ಮಿ, ತಿಮ್ಮಪ್ಪ, ನಂಜುಂಡಸ್ವಾಮಿ, ಕೆ. ಪಿ ರಾಘವೇಂದ್ರ ಹರಿಪ್ರಸಾದ್ ಶಿವಮ್ಮ ಶಪಿತ ಬೇಗಂ, ಬಿ ಎಚ್ ಸೋಮಶೇಖರ್, ಶಶಿಧರ್ ಸೂರಿ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
22.ಕೆಕೆಡಿಯು2.ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಮ್ಮೇಳನದ ಅಧ್ಯಕ್ಷರಾಗಿರುವ ಹೊಸೂರು ಪುಟ್ಟರಾಜು ಅವರನ್ನು ಸ್ವಾಗತ ಸಮಿತಿಯಿಂದ ಗೌರವ ಸಲ್ಲಿಸಿ ಸಾಂಪ್ರದಾಯಿಕವಾಗಿ ಆಹ್ವಾನಿಸಲಾಯಿತು