ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಮೂಲ ಸೌಕರ್ಯಗಳಿವೆ. ಆದರೂ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.
ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಹುತೇಕ ಶಾಲೆಗಳು ಮುಚ್ಚಲ್ಪಟ್ಟಿದೆ. ಇನ್ನುಳಿದ ಶಾಲೆಗಳು ಇಂದೋ ನಾಳೆಯೋ ಮುಚ್ಚುವ ಹಂತ ತಲುಪಿವೆ. ಸರ್ಕಾರಿ ಶಾಲೆಗಳು ಮೂಲ ಸೌಕರ್ಯ ಹೊಂದಿದ್ದು ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ ವಿದ್ಯಾರ್ಥಿಗಳ ಕೊರತೆಯೇ ಮೂಲ ಸಮಸ್ಯೆಯಾಗಿದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಓದಿದವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳೆಂಬ ನಿರ್ಲಕ್ಷ್ಯ ಕಡೆಗಣನೆ ಮಾಡುವುದು ಸರಿಯಲ್ಲ. ಪೋಷಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಿ ಶಾಲೆ ಗಳಲ್ಲಿ ಶಿಕ್ಷಕರು, ಗುಣಮಟ್ಟದ ಶಿಕ್ಷಣ, ಕ್ರೀಡಾ ಪರಿಕರಗಳು, ಆಟದ ಮೈದಾನ ಸಹಿತ ಉತ್ತಮ ಮೂಲಭೂತ ಸೌಕರ್ಯಗಳಿವೆ. ಉತ್ತಮ ಫಲಿತಾಂಶವೂ ಬರುತ್ತಿವೆ. ಸರ್ಕಾರಿ ಶಾಲೆಗಳನ್ನು ಉಳಿಸುವ ಕೆಲಸ ನಡೆಯಬೇಕಿದೆ ಎಂದರು.
6 ಶ್ರೀ ಚಿತ್ರ 2-
ಶೃಂಗೇರಿ ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಪ್ರವೀಣ ಪೂಜಾರಿ ಉದ್ಘಾಟಿಸಿದರು.ಸ್ವಾಮಿ,ಗಂಗಾಧರಪ್ಪ ಮತ್ತಿತರರು ಇದ್ದರು.