ಪ್ರಾಮಾಣಿಕತೆಯಿಂದ ಸಹಕಾರಿ ರಂಗದ ಉಳಿವು: ಹಾಲಪ್ಪ ಆಚಾರ್

KannadaprabhaNewsNetwork |  
Published : Nov 19, 2026, 02:30 AM IST
ಕುಕನೂರು ತಾಲೂಕಿನ ಮಸಬಹಂಚಿನಾಳ ಬಿಜೆಪಿ ಕಾರ್ಯಾಲಯದಲ್ಲಿ ಕುದರಿಮೋತಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕುಕನೂರು ತಾಲೂಕಿನ ಮಸಬಹಂಚಿನಾಳ ಬಿಜೆಪಿ ಕಾರ್ಯಾಲಯದಲ್ಲಿ ಕುದರಿಮೋತಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಸನ್ಮಾನಿಸಲಾಯಿತು.

ಕುಕನೂರು: ಪ್ರಾಮಾಣಿಕತೆಯಿಂದ ಸಹಕಾರಿ ರಂಗದ ಉಳಿವು ಸಾಧ್ಯ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ತಾಲೂಕಿನ ಮಸಬಹಂಚಿನಾಳ ಬಿಜೆಪಿ ಕಾರ್ಯಾಲಯದಲ್ಲಿ ಕುದರಿಮೋತಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ಜನರ ವಿಶ್ವಾಸ ಉಳಿಸಿಕೊಂಡು ಅಭಿವೃದ್ಧಿಗೆ ಶ್ರಮಿಸಬೇಕು. ಸಹಕಾರಿ ಕ್ಷೇತ್ರವು ಗ್ರಾಮೀಣ ಭಾಗದ ರೈತರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಸಹಕಾರಿ ಸಂಘದ ಮೂಲಕ ರೈತರಿಗೆ ಹಾಗೂ ಸದಸ್ಯರಿಗೆ ಉತ್ತಮ ಸೇವೆ ಒದಗಿಸುವ ಜವಾಬ್ದಾರಿ ನೂತನ ನಿರ್ದೇಶಕರ ಮೇಲಿದೆ. ಚುನಾವಣೆಯಲ್ಲಿ ಜನರು ನೀಡಿದ ಬೆಂಬಲ ಮತ್ತು ವಿಶ್ವಾಸಕ್ಕೆ ತಕ್ಕಂತೆ ಎಲ್ಲ ನಿರ್ದೇಶಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಸಹಕಾರಿ ಸಂಘಗಳು ಪಕ್ಷಾತೀತವಾಗಿ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು. ಸಂಘದ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಬೇಕು. ರೈತರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಮತ್ತು ಸಹಕಾರ ಕ್ಷೇತ್ರದ ಪ್ರಯೋಜನಗಳನ್ನು ತಲುಪಿಸುವ ನಿಟ್ಟಿನಲ್ಲಿ ನಿರ್ದೇಶಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಕುದರಿಮೋತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವುದು ಸ್ಥಳೀಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ ಎಂದರು.

ನೂತನ ನಿರ್ದೇಶಕರನ್ನು ಸನ್ಮಾನಿಸಲಾಯಿತು.

ಯಲಬುರ್ಗಾ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಮಂಡಲ ಪ್ರಧಾನ ಕಾರ್ಯದರ್ಶಿ ಅಯ್ಯನಗೌಡ, ತಾಪಂ ಮಾಜಿ ಉಪಾಧ್ಯಕ್ಷ ಶಿವಕುಮಾರ ನಾಗಲಾಪುರಮಠ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ರಾಜೂರ, ಕುದ್ರಿಮೋತಿ, ಚಂಡಿನಾಳ ಹಾಗೂ ಬೈರನಾಯಕನಹಳ್ಳಿ ಗ್ರಾಮದ ಪಕ್ಷದ ಮುಖಂಡರು, ಹಿರಿಯರು ಮತ್ತು ಪ್ರಮುಖರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ