ಪರಿಸರ ಉಳಿದರಷ್ಟೇ ಜೀವಸಂಕುಲದ ಉಳಿವು: ಡಾ.ಕುಮಾರ

KannadaprabhaNewsNetwork |  
Published : Jun 06, 2025, 12:25 AM IST
೫ಕೆಎಂಎನ್‌ಡಿ-೧ಮಂಡ್ಯದ ಕಲ್ಲುಕಟ್ಟಡ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಆಧುನಿಕ ಯುಗದಲ್ಲಿ ಯುವ ಪೀಳಿಗೆ ಪರಿಸರ ಸಂರಕ್ಷಣೆ ಮಹತ್ವ ಅರಿಯದೆ ಪರಿಸರವನ್ನು ಪೋಷಿಸುವ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಾಲಾ- ಕಾಲೇಜು ಮಕ್ಕಳಿಗೆ ಪರಿಸರದ ಜಾಗೃತಿಯ ಕುರಿತು ಅರಿವು ಮೂಡಿಸುವ ಅಗತ್ಯವಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪರಿಸರ ಉಳಿದಾಗ ಮಾತ್ರ ಜೀವಸಂಕುಲದ ಉಳಿವು ಸಾಧ್ಯ ಎಂಬ ನಿತ್ಯ ಸತ್ಯವನ್ನು ಅರಿತುಕೊಂಡು ಪ್ರಾಕೃತಿಕ ಅಸಮತೋಲನವಾಗದಂತೆ ಪರಿಸರ ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಗುರುವಾರ ನಗರದ ಕಲ್ಲು ಕಟ್ಟಡ ಕಾಲೇಜಿನ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರದಲ್ಲಿರುವ ಗಾಳಿ, ಬೆಳಕು ಮತ್ತು ನೀರು ಮನುಷ್ಯನಿಗೆ ಜೀವ ನೀಡಿದೆ. ಜೀವನಾಡಿಯಾಗಿರುವ ಪ್ರಕೃತಿಯನ್ನು ರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಮನುಷ್ಯನಿಗೆ ಪ್ರಕೃತಿಯು ಜೀವಿಸುವ ಸ್ವರ್ಗವನ್ನೇ ನೀಡಿದೆ. ಅದನ್ನು ಅರ್ಥ ಮಾಡಿಕೊಳ್ಳದೆ ಪರಿಸರದ ಮೇಲೆ ನಿರಂತರ ದಾಳಿ ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಗಿಡಗಳನ್ನು ನೆಟ್ಟು ಬೆಳೆಸುವ ಕೈಂಕರ್ಯ ತೊಡಬೇಕು. ಹುಟ್ಟುಹಬ್ಬದ ದಿನದಂದು ಮನೆಯ ಮುಂದೆ ೧೦ ರಿಂದ ೧೫ ಗಿಡಗಳನ್ನು ಬೆಳೆಸುವ ಮೂಲಕ ಹುಟ್ಟುಹಬ್ಬ ಆಚರಿಸುವ ಆಂದೋಲನವನ್ನು ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು.

ಆಧುನಿಕ ಯುಗದಲ್ಲಿ ಯುವ ಪೀಳಿಗೆ ಪರಿಸರ ಸಂರಕ್ಷಣೆ ಮಹತ್ವ ಅರಿಯದೆ ಪರಿಸರವನ್ನು ಪೋಷಿಸುವ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಾಲಾ- ಕಾಲೇಜು ಮಕ್ಕಳಿಗೆ ಪರಿಸರದ ಜಾಗೃತಿಯ ಕುರಿತು ಅರಿವು ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಅವರು ಗಿಡ ನೆಡುವ ಮೂಲಕ ಜಾಗೃತಿ ಮೂಡಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವ್ಯಶ್ರೀ, ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಮಂಡ್ಯ ಅರಣ್ಯ ವಿಭಾಗ ಎಸಿಎಫ್ ಮಹದೇವಸ್ವಾಮಿ, ಕಲ್ಲು ಕಟ್ಟಡ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತಮ್ಮೇಗೌಡ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಿಮ್ಮರಾಜು, ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮ ಇತರರಿದ್ದರು.

PREV

Recommended Stories

ಕೂಡಲೇ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿ : ತೇಜಸ್ವಿ ಆಗ್ರಹ
ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!