ಶೇ.85ಕ್ಕಿಂತ ಅಧಿಕ ಮತದಾನವೇ ಗುರಿಯಾಗಿರಲಿ : ಜಿಪಂ ಸಿಇಓ

KannadaprabhaNewsNetwork |  
Published : Apr 16, 2024, 01:14 AM ISTUpdated : Apr 16, 2024, 07:11 AM IST
ಕ್ಯಾಪ್ಷನಃ15ಕೆಡಿವಿಜಿ47ಃದಾವಣಗೆರೆಯಲ್ಲಿ ಜಿಪಂ ಸಿಇಓ, ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ ಬಿ.ಇಟ್ನಾಳ್ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳ ಕುರಿತ ಸಭೆ ನಡೆಯಿತು. | Kannada Prabha

ಸಾರಾಂಶ

 ಲೋಕಸಭಾ ಚುನಾವಣೆಯಲ್ಲಿ ಶೇ.85ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದೆ. ಆದ್ದರಿಂದ ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್   ಹೇಳಿದ್ದಾರೆ.

 ದಾವಣಗೆರೆ : ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು, ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಹೆಚ್ಚು ಮತದಾನ ಆಗುವುದರಿಂದ ಉತ್ತಮ ಅಭ್ಯರ್ಥಿಗಳ ಆಯ್ಕೆ ಸಾಧ್ಯವಿದೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಶೇ.85ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದೆ. ಆದ್ದರಿಂದ ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸುವ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರ ಮತ ಅತ್ಯಮೂಲ್ಯವಾಗಿದೆ. ಎಲ್ಲರೂ ಮೇ 7ರಂದು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಮತದಾನ ಪ್ರಮಾಣ ಹೆಚ್ಚಳ ಪ್ರಮುಖ ಗುರಿಯಾಗಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿ ಮತದಾನ ಕಡಿಮೆಯಾಗಿದೆ ಮತ್ತು ಮತದಾನ ಹೆಚ್ಚಾದ ಕಡೆಯೂ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದರು.

60ಕ್ಕೂ ಅಧಿಕ ವಿಶೇಷ ಮತಗಟ್ಟೆ:

ಹೊಸ ಮತದಾರರು, ಮಧ್ಯ ವಯಸ್ಕರು, ಮಹಿಳೆಯರು, ಹಿರಿಯ ನಾಗರಿಕರು, ವಿಶೇಷಚೇತನರು ಸೇರಿದಂತೆ ಎಲ್ಲ ವರ್ಗದ ಮತದಾರರ ಆಕರ್ಷಣೆ ನಮ್ಮ ಗುರಿಯಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 60ಕ್ಕಿಂತ ಹೆಚ್ಚು ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಯುವ ಮತಗಟ್ಟೆ, ಸಖಿ, ವಿಶೇಷಚೇತನರು, ಸಾಪ್ರದಾಯಿಕ, ವಿಷಯಾಧಾರಿತ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದರು.

ಎಲ್ಲ ಮತಗಟ್ಟೆಯಲ್ಲಿ ಕನಿಷ್ಠ ಸೌಲಭ್ಯದ ಭರವಸೆ ಮೂಡಿಸುವುದು, ಸಾಂಪ್ರದಾಯಿಕ, ಸಾಂಸ್ಕೃತಿಕ, ಜಾನಪದ ಕಾರ್ಯಕ್ರಮ, ಚರ್ಚಾಸ್ಪರ್ಧೆ, ಗುಂಪು ಚರ್ಚೆ, ಆನ್‌ಲೈನ್ ಸೇರಿದಂತೆ, ಮನೆ ಮನೆ ಭೇಟಿ, ಚುನಾವಣಾ ಆಯೋಗದ ಕ್ರಮಗಳ ಜಾಗೃತಿ, ಫ್ಯಾಷನ್ ಶೋ, ವಿವಿಧ ಪಂದ್ಯಾವಳಿಗಳು, ಜಾಥಾ, ಕವ್ವಾಲಿ, ಕಾರ್ಮಿಕರ ಅರಿವು, ಸಂಗೀತ ಕಾರ್ಯಕ್ರಮ, ಮ್ಯಾರಾಥಾನ್, ಕ್ವಿಜ್, ರೋಡ್‌ ಶೋ, ರೀಲ್ಸ್, ಸಾಹಸ ಕ್ರೀಡೆಗಳು, ಯೋಗಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲು ತಿಳಿಸಿದರು.

ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ವಾರ್ಡ್ ಮಟ್ಟದವರೆಗೂ ಹಮ್ಮಿಕೊಳ್ಳಬೇಕು. ಪ್ರತಿನಿತ್ಯ ಮತದಾರರ ಜಾಗೃತಿ ಕಾರ್ಯಕ್ರಮಗಳು ನಡೆಯುವಂತೆ ಇಲಾಖಾವಾರು ಪಟ್ಟಿಯನ್ನು ನೀಡಬೇಕು. ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳುವುದು ನಮ್ಮಗಳ ಜವಾಬ್ದಾರಿ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಪಾಲಿಕೆ ಆಯುಕ್ತರಾದ ರೇಣುಕಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು. 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿಗಾಗಿ ಮಕ್ಕಳಿಂದ ಪತ್ರ: ₹490 ಕೋಟಿ ಕೊಟ್ಟ ಸಿಎಂ!
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಬಿಯರ್‌, ವೈನ್‌ ಅಗ್ಗ?