ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಅವರು ಭಾನುವಾರ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಭಾರತ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮೀಣ ಮತ್ತು ನಗರ ಪ್ರದಶಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ರಾಮೀಣ ಹಾಗೂ ನಗರದ ಜನರಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದು, ಮುಖ್ಯವಾಗಿ ಈ ಯಾತ್ರೆಯಲ್ಲಿ ಉಜ್ವಲ ಯೋಜನೆ, ಆಯುಷ್ಮಾನ ಭಾರತ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡ್, ಪ್ರಧಾನ ಮಂತ್ರಿ ಸ್ವನಿಧಿ, ಬ್ಯಾಂಕಿನಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಜೀವನ ಬಿಮಾ ಯೋಜನೆ, ಮುದ್ರಾ, ವಿಶ್ವಕರ್ಮ ಯೋಜನೆ ಮತ್ತು ಇನ್ನಿತರ ಯೋಜನೆಗಳು ಜಾರಿಯಲ್ಲಿದ್ದು ಜನರು ಇವೆಲ್ಲ ಯೋಜನೆಗಳ ಲಾಭ ಸ್ಥಳದಲ್ಲೇ ಮಾಹಿತಿ ಪಡೆದು ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.ಯೋಜನೆಗಳ ಸಮರ್ಪಕ ಮಾಹಿತಿ ನೀಡುವ ಉದ್ದೇಶದಿಂದ ಇಡಿ ದೇಶದಲ್ಲಿ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಾರಂಭಿಸಲಾಗಿದೆ. ಯೋಜನೆಗಳ ಲಾಭ ಪಡೆದು ತಮ್ಮ ಸ್ವಂತ ಅಭಿವೃದ್ಧಿಯ ಜತೆಗೆ ದೇಶದ ಅಭಿವೃದ್ಧಿಗೆ ಎಲ್ಲರೂ ಮುಂದಾಗಬೇಕು ಎಂದರು.
ಪ್ರಧಾನ ಮಂತ್ರಿಯವರ ಉಜ್ವಲಾ ಯೋಜನೆ, ಸ್ವ ಸಹಾಯ ಗುಂಪುಗಳಿಗೆ ಸಾಲ ಮಂಜೂರಾತಿ, ಆಯುಷ್ಮಾನ್ ಭಾರತ, ಮುದ್ರಾ, ಸ್ವನಿಧಿ, ಪ್ರಧಾನ ಮಂತ್ರಿಯವರ ಆವಾಸ ಯೋಜನೆ ಸೇರಿದಂತೆ ಹಲವಾರು ಜನಪರ ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳು ಮಳಿಗೆಯನ್ನು ತೆರೆದು ಅಧಿಕಾರಿಗಳು ಫಲಾನುಭವಿಗಳಿಗೆ ಮತ್ತು ನೆರೆದಿದ್ದ ಸಾರ್ವಜನಿಕರಿಗೆ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು.