ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಎಮ್ಮೆ ಮೇಯಿಸಲು ಜಮೀನಿಗೆ ಹೋಗಿದ್ದ ಯುವತಿ ನೀಲಮ್ಮ ಖಿಲಾರಹಟ್ಟಿ ಅದಕ್ಕೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಹೋಗಿದ್ದಾಳೆ. ಈ ವೇಳೆ ಕಾಲು ಜಾರಿ ಆ ಗುಂಡಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಮುತ್ತಪ್ಪ ಖಿಲಾರಹಟ್ಟಿ ಯುವತಿಯನ್ನು ರಕ್ಷಿಸಲು ಗುಂಡಿಗೆ ಇಳಿದಿದ್ದಾರೆ. ಈ ವೇಳೆ ಆತನೂ ನೀರಿನಿಂದ ಹೊರ ಬರಲು ಪರದಾಡಿದ್ದಾನೆ. ಈ ವೇಳೆ ಇವರ ರಕ್ಷಣೆಗೆ ಆಗಮಿಸಿದ ಶಿವು ಯಾಳವಾರ ಸಹ ನೀರು ನೀರು ಪಾಲಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ನೀರಿನಿಂದ ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿನಲ್ಲಿದ್ದ ಈ ಆಳವಾದ ಗುಂಡಿ ಇದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.