ಎಲ್ಲ ಹಂತಗಳಲ್ಲಿ ಕನ್ನಡ ಬಳಕೆಗೆ ಉತ್ತೇಜನ ಅಗತ್ಯ

KannadaprabhaNewsNetwork |  
Published : Nov 02, 2025, 02:15 AM IST
ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡಿಗರ ಅವಿರತ ಹೋರಾಟದ ಫಲ‌ವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು. ನಮ್ಮ ನಾಡಗೀತೆಯಲ್ಲಿ ಭಾರತ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ಕಾರ್ಯದರ್ಶಿ ಎ.ಜಯರಾಮ್, ಆರ್.ಗೋವಿಂದರಾಜು, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಕಾರ್ಯದರ್ಶಿ ಜಿ.ಸುರೇಶ್, ಕಸಾಪ ಬಳಗದ ವಿ.ಎಸ್.ಹೆಗಡೆ, ಕುಮಾರ್, ಉದಯಾರಾಧ್ಯ, ವೆಂಕಟರಾಜು, ಜಿ.ಎಂ.ನಾಗರಾಜ್, ಅಣ್ಣಯ್ಯ, ವತ್ಸಲಾ, ವೆಂಕಟೇಶರೆಡ್ಡಿ, ಗುರುರಾಜಪ್ಪ, ಎಂ.ಸಿ.ಮಂಜುನಾಥ್, ಕೋದಂಡರಾಮ್, ಮುನಿರಾಜು, ಸಫೀರ್, ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್, ಮಹಾದೇವಪ್ಪ, ರಂಗಸ್ವಾಮಯ್ಯ ಮತ್ತಿತರರು ಭಾಗವಹಿಸಿದ್ದರು.

1ಕೆಡಿಬಿಪಿ1-

ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನಡೆಯಿತು.

PREV

Recommended Stories

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ
ಕೊಂಕಣಿ ನೆಲದಲ್ಲಿ ಕನ್ನಡದಲ್ಲಿ ಸಹಿ ಸಂಗ್ರಹ, ಕದಂಬ ವೃಕ್ಷ ಪೂಜಿಸಿ ರಾಜ್ಯೋತ್ಸವ ಆಚರಣೆ