ರಮೇಶ್ ಕತ್ತಿ ವಿರುದ್ಧ ಸಿಡಿದೆದ್ದ ವಾಲ್ಮೀಕಿ ಸಮಾಜ

KannadaprabhaNewsNetwork |  
Published : Oct 21, 2025, 01:00 AM IST
ಪ್ರತಿಭಟನೆ | Kannada Prabha

ಸಾರಾಂಶ

ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜ ಸಿಡಿದೆದ್ದಿದೆ. ಶೀಘ್ರವೇ ಅವರನ್ನು ಬಂಧಿಸಬೇಕು‌ ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ವಾಲ್ಮೀಕಿ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜ ಸಿಡಿದೆದ್ದಿದೆ. ಶೀಘ್ರವೇ ಅವರನ್ನು ಬಂಧಿಸಬೇಕು‌ ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ವಾಲ್ಮೀಕಿ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಅವರ ಬಂಧನಕ್ಕೆ ಆಗ್ರಹಿಸಿ ಬಾಗಲಕೋಟೆ ಸೇರಿ 12ಕಡೆ ಜಾತಿನಿಂದನೆ (ಅಟ್ರಾಸಿಟಿ) ಕೇಸ್‌ ದಾಖಲಿಸಲಾಗಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ವೇಳೆ ಜಾರಕಿಹೊಳಿ ಟೀಂ ವಿರುದ್ಧ ಟೀಕಾಪ್ರಹಾರ ನಡೆಸುವ ಭರದಲ್ಲಿ ರಮೇಶ್‌ ಕತ್ತಿಯವರು ಜಾರಕಿಹೊಳಿ ಕುಟುಂಬ ಪ್ರತಿನಿಧಿಸುವ ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಸಿದ್ದರು. ಇದು ವಾಲ್ಮೀಕಿ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಕತ್ತಿಯವರ ಬಂಧನಕ್ಕೆ ಆಗ್ರಹಿಸಿ ಸಮುದಾಯದ ಮುಖಂಡರು ಸೋಮವಾರ ಬೆಳಗಾವಿ, ಚಿತ್ರದುರ್ಗ, ಹುಕ್ಕೇರಿ, ರಾಯಚೂರು, ಯಾದಗಿರಿ ಸೇರಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮಾಜದ ಮುಖಂಡರು, ಕತ್ತಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಭಾವಚಿತ್ರ ದಹಿಸಿ ತಮ್ಮ ಆಕ್ರೋಶ ಹೊರ ಹಾಕಿದರು. ಅವರನ್ನು ಬಂಧಿಸದಿದ್ದರೆ ಬೆಳಗಾವಿ ಬಂದ್‌ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಯಾದಗಿರಿ ಜಿಲ್ಲೆ ಸುರಪುರದಲ್ಲಿ ಗಾಂಧಿ ವೃತ್ತದ ಬಳಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಕೋರ್ಟ್‌ ವೃತ್ತದಲ್ಲಿ, ಚಿತ್ರದುರ್ಗದಲ್ಲಿ ನಗರದ ಒನಕೆ ಓಬವ್ವ ವೃತ್ತದಲ್ಲಿ, ರಾಯಚೂರಿನಲ್ಲಿ ಮಹರ್ಷಿ ವಾಲ್ಮೀಕಿ ವೃತ್ತದ ಬಳಿ ಪ್ರತಿಭಟನೆಗಳು ನಡೆದವು. ಇದೇ ವೇಳೆ, ಗೋಕಾಕ್, ಹುಕ್ಕೇರಿ, ಯಮಕನಮರಡಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.ಕೇಸ್‌ ದಾಖಲು:

ಇದೇ ವೇಳೆ, ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಸೋಮವಾರ ದಾವಣಗೆರೆಯ ಬಡಾವಣೆ ಠಾಣೆ, ಹಾಸನ ಜಿಲ್ಲೆಯ ಬೇಲೂರು, ಬಾಗಲಕೋಟೆಯ ನವನಗರ, ಕೊಪ್ಪಳ ನಗರ, ಯಾದಗಿರಿ ಜಿಲ್ಲೆಯ ಸುರಪುರ ಸೇರಿ 12 ಠಾಣೆಗಳಲ್ಲಿ ಜಾತಿನಿಂದನೆ (ಅಟ್ರಾಸಿಟಿ) ಕೇಸ್ ದಾಖಲಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ
ಹುಟ್ಟು ಸಾವಿನ ಮಧ್ಯೆ ಸಾಧನೆ ಮಹತ್ವದ್ದು: ಡಾ.ಮುರುಗೇಶ ನಿರಾಣಿ