ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಅಗತ್ಯ

KannadaprabhaNewsNetwork |  
Published : Oct 02, 2026, 03:00 AM IST
(ಫೋಟೊಬಿಕೆಟಿ9, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ  ಅವರು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು)  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಹಿರಿಯ ನಾಗರಿಕರಿಗೆ ಗೌರವ, ಪ್ರೀತಿ ಹಾಗೂ ಕಾಳಜಿ ತೋರುವ ಸಂಸ್ಕಾರವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹಿರಿಯ ನಾಗರಿಕರಿಗೆ ಗೌರವ, ಪ್ರೀತಿ ಹಾಗೂ ಕಾಳಜಿ ತೋರುವ ಸಂಸ್ಕಾರವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿ.ಪಂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತು ಕ್ಷೇಮಾಭಿವೃದ್ಧಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಕಡಿಮೆಯಾಗುತ್ತಿದ್ದು, ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದರು.

ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡಿ, ವೈದ್ಯರು, ಎಂಜಿನಿಯರಗಳಾಗಿ ಮಾಡಬೇಕೆಂಬ ಕನಸು ಕಾಣುತ್ತಾರೆ. ಮಕ್ಕಳ ಉನ್ನತ ಶಿಕ್ಷಣ ಹಾಗೂ ಭವಿಷ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅವರನ್ನು ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ದೇಶ-ವಿದೇಶಗಳಿಗೆ ಕಳುಹಿಸುತ್ತಾರೆ. ಆದರೆ, ವೃದ್ದಾಪ್ಯದಲ್ಲಿ ಪಾಲಕರಿಗೆ ಮಕ್ಕಳ ಆರೈಕೆ ದೊರೆಯದಂತಾಗುತ್ತದೆ. ವೃದ್ಧಾಪ್ಯದಲ್ಲಿ ಪಾಲಕರನ್ನು ಪ್ರೀತಿ, ಗೌರದಿಂದ ಕಾಣುವುದು ಮಕ್ಕಳ ಕರ್ತವ್ಯವಾಗಿದೆ. ಹಿರಿಯ ನಾಗರಿಕರ ರಕ್ಷಣೆಗೆ ಕೇವಲ ಕಾನೂನುಗಳಿಂದ ಸಾಧ್ಯವಿಲ್ಲ. ಪ್ರತಿಯೊಬ್ಬರ ಮನಸ್ಸಿನಲ್ಲಿ ಪರಿವರ್ತನೆ ಉಂಟಾದಾಗ ಮಾತ್ರ ಸಾಧ್ಯ ಎಂದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ಮಕ್ಕಳು ಚಿಕ್ಕವರಿದ್ದಾಗ ಅವರನ್ನು ಪಾಲನೆ, ಪೋಷಣೆ ಮಾಡಿ ಉತ್ತಮ ಜೀವನ ರೂಪಿಸಿಕೊಟ್ಟ ತಂದೆ-ತಾಯಿಗಳನ್ನು ಅವರ ಮುಪ್ಪಿನ ಸಂದರ್ಭದಲ್ಲಿ ಬಿಟ್ಟು ಹೋಗುವುದು ಎಷ್ಟು ಸರಿ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಹಿರಿಯರ ಮೇಲಿನ ಭಕ್ತಿ, ಗೌರವ ಹಾಗೂ ಕುಟುಂಬದ ಮೌಲ್ಯಗಳು ನಶಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂದಿನ ಹುಡುಗರು ಸರಿಯಾದ ಮಾರ್ಗದಲ್ಲಿ ಸಾಗಬೇಕಿದೆ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಚಂದ್ರಶೇಖರ ದಿಡ್ಡಿ ಮಾತನಾಡಿ, ಮಕ್ಕಳ ಮೇಲೆ ಅತಿಯಾದ ಪ್ರೀತಿ ಮತ್ತು ಕಾಳಕಿ ಇರಬೇಕು. ಆದರೆ, ಅದೇ ಸಂದರ್ಭದಲ್ಲಿ ಅವರು ಭವಿಷ್ಯದಲ್ಲಿ ಸ್ವಾವಲಂಬಿಯಾಗಿ ಬದುಕುವಂತೆ ಬೆಳೆಸುವುದು ಕೂಡ ಪಾಲಕರ ಜವಾಬ್ದಾರಿಯಾಗಿದೆ ಎಂದರು.

ವಿಶ್ವ ಹರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಪೂರ್ಣಾನಂದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಹಾಂತೇಶ ಕುರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ, ಹಿರಿಯ ನಾಗರಿಕರಾದ ತಾತಾಸಾಹೇಬ ಬಾಂಗಿ, ಗುಳೇದ, ಪರಶುರಾಮ ದರೆಗೋಳ, ಎಸ್.ಎಸ್.ಬೆಳಗಲಿ ಇತರರು ಇದ್ದರು. ಸಾಧನೆಗೈದವರಿಗೆ ಸನ್ಮಾನಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆ ಮಾಡಿದ 14 ಜನರನ್ನು ಸನ್ಮಾನಿಸಲಾಯಿತು. ತಿಪ್ಪಣ್ಣ ಸುಗತೇಕರ, ನಾರಾಯಣ ದುಂಡಪ್ಪ ಪತ್ತಾರ (ಕಲಾ), ಬಸಪ್ಪ ಭಜಂತ್ರಿ, ತಾತಾಸಾಹೇಬ ಬಾಂಗಿ, ಶಿವರಾಜ ಹೂಗಾರ, ಪಕೀರಪ್ಪ ಹಟ್ಟಿ (ಸಾಹಿತ್ಯ), ಗುರಪ್ಪಾ ಹೊನ್ನಪ್ಪ ಚೌರಿ, ಶ್ರೈಶೈಲಪ್ಪ ಚಲವಾದಿ, ಗುರುಸಂಗಪ್ಪ ತಾರಿವಾಡ (ಶಿಕ್ಷಣ), ಡಾ.ನಾರಾ, ಶ್ರೀಶೈಲ ಹಡಪದ, ಮಹಾದೇವ, ನಿಂಗಪ್ಪ ಮದಿ (ಸಮಾಜ ಸೇವೆ), ವೀರಪ್ಪ ಶೀಪರಮಟ್ಟಿ (ಪ್ರಗತಿಪರ ರೈತ).

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಫಲತೆಯಿಂದ ಕುಗ್ಗದೆ ನಿರಂತರ ಪ್ರಯತ್ನವೇ ಯಶಸ್ಸಿನ ಗುಟ್ಟು
ಮಕ್ಕಳಿಗೆ ಗೂಗಲ್‌ ಗುರುವಿನ ಜ್ಞಾನ ಅಗತ್ಯ