ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪೊಲೀಸ್ ಕಾಲೋನಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ 1994-97ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ‘ಗುರುವಂದನಾ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಾಗ ಗದರಿಸಿ, ತಪ್ಪು ಮಾಡಿದಾಗ ತಿದ್ದಿ, ಸೋತಾಗ ಬೆನ್ನುತಟ್ಟಿ ನಮ್ಮಲ್ಲಿ ಧೈರ್ಯ ತುಂಬಿದವರು ಗುರುಗಳು. ಪೊಲೀಸ್ ವ್ಯವಸ್ಥೆಯಲ್ಲಿ ನಾನಿಂದು ಈ ಹಂತಕ್ಕೆ ಬಂದು ನಿಲ್ಲಲು ನನ್ನ ಬದುಕಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರೇ ಕಾರಣ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯವಾದರೆ, ಶಿಸ್ತು ಮತ್ತು ಮೌಲ್ಯವುಳ್ಳ ಉತ್ತಮ ಪ್ರಜೆಗಳನ್ನು ನಿರ್ಮಿಸುವುದು ಶಿಕ್ಷಕರ ಮಹತ್ತರ ಹೊಣೆ. ಹಳೆಯ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುತ್ತಾ, ಕಲಿಸಿದ ಶಿಕ್ಷಕರನ್ನು ಗೌರವಿಸುತ್ತಿರುವುದು ಇಂದಿನ ಪೀಳಿಗೆಗೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ತಂದೆ-ತಾಯಿ ಜನ್ಮ ನೀಡಿದರೆ ಆ ಜನ್ಮಕ್ಕೆ ಒಂದು ಸಾರ್ಥಕ ಜೀವನವನ್ನು ರೂಪಿಸಿಕೊಡುವವರು ಗುರುಗಳು. ಜಾತಿ-ಧರ್ಮ, ಬಡವ-ಶ್ರೀಮಂತ ಎಂಬ ಭೇದವಿಲ್ಲದೆ ಎಲ್ಲ ಮಕ್ಕಳಿಗೂ ಸಮಾನವಾಗಿ ಜ್ಞಾನ ಧಾರೆ ಎರೆಯುವ ಏಕೈಕ ವ್ಯಕ್ತಿ ಶಿಕ್ಷಕ. ಹುಟ್ಟು-ಸಾವುಗಳ ನಡುವಿನ ಬದುಕನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯ. ಆಧುನಿಕ ಕಾಲದಲ್ಲಿ ಭೌತಿಕ ಸುಖಕ್ಕಿಂತ ನೆಮ್ಮದಿಯ ಜೀವನ ಮುಖ್ಯವಾಗಿದ್ದು, ಗುರುಗಳು ತೋರಿದ ದಾರಿಯಲ್ಲಿ ಸಾಗಿದಾಗ ಮಾತ್ರ ಜೀವನ ಸುಂದರವಾಗುತ್ತದೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಡಾ. ಕೆ. ಶಬಾನಾ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, 1994–97ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.