ವಚನಗಳು ಸರ್ವಕಾಲಕ್ಕೂ ಶ್ರೇಷ್ಠ: ಅಪರ ಜಿಲ್ಲಾಧಿಕಾರಿ

KannadaprabhaNewsNetwork |  
Published : Apr 21, 2026, 02:15 AM IST
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಹನ್ನೆರಡನೇ ಶತಮಾನದ ಬಹುದೊಡ್ಡ ಸಮಾಜ ಸುಧಾರಕರು ಬಸವಣ್ಣನವರು. ಮೇಲು ಕೀಳು, ಜಾತಿ ಧರ್ಮ, ಮಡಿ-ಮೈಲಿಗೆ ತುಂಬಿದ್ದ ಸಮಯದಲ್ಲಿ ನೊಂದವರ, ದೀನದಲಿತರ ಉದ್ಧಾರಕ್ಕೆ ನಿಂತವರು.

ಕನ್ನಡಪ್ರಭ ವಾರ್ತೆ ಕಾರವಾರ

ಹನ್ನೆರಡನೇ ಶತಮಾನದ ಬಹುದೊಡ್ಡ ಸಮಾಜ ಸುಧಾರಕರು ಬಸವಣ್ಣನವರು. ಮೇಲು ಕೀಳು, ಜಾತಿ ಧರ್ಮ, ಮಡಿ-ಮೈಲಿಗೆ ತುಂಬಿದ್ದ ಸಮಯದಲ್ಲಿ ನೊಂದವರ, ದೀನದಲಿತರ ಉದ್ಧಾರಕ್ಕೆ ನಿಂತವರು. ಕೆಳವರ್ಗದವರನ್ನು ಮೇಲ್ವರ್ಗದವರು ಅತ್ಯಂತ ಹೀನಾಯವಾಗಿ ಕಾಣುತಿದ್ದ ಆ ಅನ್ಯಾಯವನ್ನು ಹೋಗಲಾಡಿಸಲೆಂದೇ ಬಸವಣ್ಣನವರ ಕಲ್ಯಾಣದಲ್ಲಿ ಕ್ರಾಂತಿಯ ಬೀಜ ಬಿತ್ತಿದರು. ಅವರ ವಚನಗಳು ಸರ್ವಕಾಲಕ್ಕೂ ಶ್ರೇಷ್ಠ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು.ಸೋಮವಾರ ಜಿಲ್ಲಾಡಳಿತ, ಜಿಪಂ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾರವಾರದ ನ್ಯೂ ಕೆಎಚ್‌ಬಿ ಕಾಲನಿ ಹಬ್ಬುವಾಡದ ಬ್ರಹ್ಮಕುಮಾರಿ ಸಭಾಂಗಣ, ಓಂ ಶಾಂತಿ ಭವನದಲ್ಲಿ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.12ನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಲು, ಗಂಡು ಹೆಣ್ಣು, ಜಾತಿ ಧರ್ಮ, ಮೂಡ ನಂಬಿಕೆ ಈಗೇ ಅಸಮಾನತೆಯನ್ನು ಹೊಗಲಾಡಿಸಲು ಬಿತ್ತಿದ ಕಾಂತ್ರಿಯ ಬೀಜ ಇಂದು ಹೆಮ್ಮರವಾಗಿ ಬೆಳೆದಿದೆ. ಮಹಿಳೆಯರಿಗೆ ಉನ್ನತ ಸ್ಥಾನಮಾನ, ಸಮಾನ ಅವಕಾಶ ಕಲ್ಪಿಸಿ, ಅನುಭವ ಮಂಟಪ ನಿರ್ಮಿಸಿ ಎಲ್ಲಾ ಸಮುದಾಯವರನ್ನು ಒಗ್ಗೂಡಿಸಿ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜದಲ್ಲಿನ ಅನಿಷ್ಠ ಆಚರಣೆಗಳ ವಿರುದ್ಧ ಹೊರಾಡಿದರು. ಸರ್ಕಾರವು ವಿಶ್ವಗುರು ಬಸವಣ್ಣನವರನ್ನು ಸಾoಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಅವರ ಒಂದೊಂದು ವಚನಗಳು ವಿಶ್ವ ವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆ ಇಲ್ಲ ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಪಿ. ಮಾತನಾಡಿ, ಹನ್ನೇರಡನೇ ಶತಮಾನದಲ್ಲಿ ಸಮಾಜದಲ್ಲಿನ ಅಸಮಾನತೆಯನ್ನು ಹೊಗಲಾಡಿಸಲು, ಸಮಾಜದಲ್ಲಿರುವ ಪ್ರತಿಯೊಬ್ಬರು ಸಮಾನರು ಎಂಬ ಮನೋಭಾವವನ್ನು ಬಿತ್ತಿದವರು ಬಸವಣ್ಣ ಎಂದರು.

ಬಸವಣ್ಣನವರ ಕುರಿತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ಕವಿತ ಅಕ್ಕನವರು ವಿಶೇಷ ಉಪನ್ಯಾಸ ನೀಡಿ, ಬಸವಣ್ಣನವರ ಜಯಂತಿ ಕೇವಲ ಜಯಂತಿಯಾಗದೇ ಕ್ರಾಂತಿಯ ಸ್ಮರಣೆಯಾಗಿದೆ ಎಂದರು.

ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರು,ವೀರಶೈವ ಸಾoಸ್ಕೃತಿಕ ಸಂಘದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಇದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ ಸ್ವಾಗತಿಸಿದರು. ನ್ಯೂ ಹೈಸ್ಕೂಲ್ ಶಿಕ್ಷಕ ಕೃಷ್ಣಮೂರ್ತಿ ಶಿವು ಹುಳ್ಸೆಮಕ್ಕಿ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿಯಲ್ಲಿ ಕಿಡಿಗೇಡಿಗಳಿಂದ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಧ್ವಂಸ
ಭಾರತದಲ್ಲಿ ಜಾತ್ಯಾತೀತ ಪರಿಕಲ್ಪನೆ ಮೂಡಿಸಿದ್ದೇ ಕಲ್ಯಾಣ: ಡಾ. ವಿ.ಎಸ್. ಮಾಳಿ