ಹಳ್ಳಿಬೈಲು ಸರ್ಕಾರಿ ಶಾಲೆಯಲ್ಲಿ ಬೇಸಿಗೆ ಶಿಬಿರ ನಡೆಸುವುದು ಗ್ರಾಪಂಗೆ ಹೆಮ್ಮೆ: ಎಚ್‌.ಇ.ದಿವಾಕರ

KannadaprabhaNewsNetwork |  
Published : Apr 16, 2025, 12:33 AM IST
ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10 ದಿನಗಳ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯಿತಿ ಸದಸ್ಯ ಎಚ್‌.ಇ.ದಿವಾಕರ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಸುತ್ತಿರುವುದು ಸೀತೂರು ಗ್ರಾಪಂಗೆ ಹೆಮ್ಮೆ ತಂದಿದೆ ಎಂದು ಗ್ರಾಪಂ ಸದಸ್ಯ ಎಚ್‌.ಇ.ದಿವಾಕರ ತಿಳಿಸಿದರು.

10 ದಿನಗಳ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಸುತ್ತಿರುವುದು ಸೀತೂರು ಗ್ರಾಪಂಗೆ ಹೆಮ್ಮೆ ತಂದಿದೆ ಎಂದು ಗ್ರಾಪಂ ಸದಸ್ಯ ಎಚ್‌.ಇ.ದಿವಾಕರ ತಿಳಿಸಿದರು.

ಮಂಗಳವಾರ ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕದಕುಣಿ ಕ್ಲಸ್ಠರ್ ಮಟ್ಟದ ವ್ಯಾಪ್ತಿಯ 11 ಶಾಲೆ ಗಳ 1- 7 ನೇ ತರಗತಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಏರ್ಪಡಿಸಿರುವುದು ತಾಲೂಕಿನಲ್ಲೇ ಪ್ರಥಮ. ಬೇಸಿಗೆ ಶಿಬಿರಕ್ಕೆ ಗ್ರಾಪಂನಿಂದ ಎಲ್ಲಾ ಸಹಕಾರ ನೀಡಲಾಗುವುದು ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಮಾತನಾಡಿ, ಕೆಲವು ವರ್ಷಗಳ ಹಿಂದೆ ಸರ್ಕಾರ ಶಾಲೆಗಳಲ್ಲಿ ಚಿಣ್ಣರ ಅಂಗಳ ಎಂಬ ಕಾರ್ಯಕ್ರಮವನ್ನು ವರ್ಷದಲ್ಲಿ 1- 2 ತಿಂಗಳು ನಡೆಸುತ್ತಿತ್ತು. ಇದಕ್ಕೆ ಶಿಕ್ಷಕರಿಗೆ ಗೌರವ ಧನ ಸಹ ನೀಡಲಾಗುತ್ತಿತ್ತು. ಸರ್ಕಾರಿ ಶಾಲೆ ಯಲ್ಲಿ ಬೇಸಿಗೆ ಶಿಬಿರ ನಡೆಸುವುದರಿಂದ ಮುಂದಿನ ದಿನಗಳಲ್ಲಿ ಉಳಿದ ಶಾಲೆಗಳಿಗೆ ಪ್ರೇರಣೆಯಾಗಬಹುದು ಎಂದರು.

ರಾಜ್ಯ ಭಡ್ತಿ ಮುಖ್ಯೋಪಾಧ್ಯಾಯರ ಸಂಘದ ಉಪಾಧ್ಯಕ್ಷ ಅಶೋಕ್ ಮಾತನಾಡಿ, 4 ಗೋಡೆಗಳ ಮಧ್ಯೆ ಶಿಕ್ಷಣ ಪಡೆಯುವ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ಅನೇಕ ಜ್ಞಾನ ಸಿಗಲಿದೆ. ಸರ್ಕಾರಿ ಶಾಲೆ ಈ ಹೊಸ ಪ್ರಯೋಗ ಬೇರೆ ಶಾಲೆಗಳಿಗೆ ಪ್ರೇರಣೆ ಎಂದರು.

ಸಭೆ ಅಧ್ಯಕ್ಷತೆಯನ್ನು ಶಾಲೆ ಎಸ್‌ ಡಿಎಂಸಿ ಅಧ್ಯಕ್ಷ ಅಕ್ಬರ್ ಆಲಿ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಎಸ್‌ ಡಿಎಂಸಿ ಉಪಾಧ್ಯಕ್ಷೆ ರೂಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಆರ್.ನಾಗರಾಜ್, ನಾಗರಮಕ್ಕಿ ಸರ್ಕಾರಿ ಶಾಲೆ ಎಸ್‌ ಡಿ ಎಂ ಸಿ ಅಧ್ಯಕ್ಷ ಮಹೇಶ್, ಮುಖ್ಯೋಪಾಧ್ಯಾಯ ಬಸವರಾಜ್, ಸಹ ಶಿಕ್ಷಕರಾದ ರಂಗನಾಥ, ಸುಪ್ರೀತ, ಶ್ವೇತ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ