ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಅಪಾಯ ತಪ್ಪಿದ್ದಲ್ಲ

KannadaprabhaNewsNetwork |  
Published : Jul 29, 2024, 12:50 AM IST
ಡಿಸಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಲಮಟ್ಟಿ ಲಾಲಬಹದ್ದೂರ ಆಣೆಕಟ್ಟಿನಿಂದ ಹೆಚ್ಚುವರಿ ಕೃಷ್ಣಾ ನದಿಯಿಂದ ನೀರನ್ನು ಹೊರಬಿಡುತ್ತಿರುವ ಕಾರಣ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಮೂದೂರ, ಕಾಳಗಿ ಗ್ರಾಮ ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳಿ ಪ್ರವಾಹದ ಭೀತಿ ಮತ್ತು ಮುಳುಗಡೆಯಾಗುವ ಬಗ್ಗೆ ಪರಿಶಿಲಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಆಲಮಟ್ಟಿ ಲಾಲಬಹದ್ದೂರ ಆಣೆಕಟ್ಟಿನಿಂದ ಹೆಚ್ಚುವರಿ ಕೃಷ್ಣಾ ನದಿಯಿಂದ ನೀರನ್ನು ಹೊರಬಿಡುತ್ತಿರುವ ಕಾರಣ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಮೂದೂರ, ಕಾಳಗಿ ಗ್ರಾಮ ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳಿ ಪ್ರವಾಹದ ಭೀತಿ ಮತ್ತು ಮುಳುಗಡೆಯಾಗುವ ಬಗ್ಗೆ ಪರಿಶಿಲಿಸಿದರು.

ಈ ವೇಳೆ ಮಾಹಿತಿ ನೀಡಿರುವ ಅವರು, ಸದ್ಯ ಆಲಮಟ್ಟಿ ಜಲಾಶಯಲಕ್ಕೆ ಹೆಚ್ಚುವರಿ ನೀರು ಹರಿದು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಅಗತ್ಯ ನೀರನ್ನು ಮಾತ್ರ ತಡೆ ಹಿಡಿದು ಇನ್ನುಳಿದ ಹೆಚ್ಚುವರಿ ನೀರನ್ನು ಹರಿಬಿಡಲಾಗುತ್ತಿದೆ. ಕಾರಣ ಕೃಷ್ಣಾ ನದಿ ತೀರದ ಗ್ರಾಮಗಳ ಜನರಿಗೆ ಅಪಾಯ ತಪ್ಪಿದ್ದಲ್ಲ ಜೊತೆಗೆ ನದಿ ನೀರಿನಲ್ಲಿ ಮೊಸಳೆಗಳು ಇದ್ದು ಜನರು ತಮ್ಮ ಮಕ್ಕಳನ್ನು, ಜಾನುವಾರುಗಳನ್ನಾಗಲಿ ಯಾರು ನದೀ ತೀರಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಕಾಟ ತಪ್ಪಿಸಲು ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಬೇಕು. ಆಯಾ ಗ್ರಾಮಗಳ ಮೂಲ ಸೌಲಭ್ಯಗಳ ಕೊರತೆಯಾಗದಂತೆ ಮತ್ತು ಪ್ರವಾಹದ ಕುರಿತು ಜನಸಾಮಾನ್ಯರಾಗಲಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮನ್ನು ಸಂಪರ್ಕಿಸುವಂತೆ ಸೂಚಿಸಿದರು.

ಅಲ್ಲದೇ, ಈ ಸಂಬಂಧ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಮೊಬೈಲ್‌ನ್ನು ಸ್ವೀಚ್ ಆಪ್ ಮಾಡಿಕೊಳ್ಳದಂತೆ ಮಾಡದಂತೆ ನೋಡಿಕೊಳ್ಳಬೇಕು. ಕರೆ ಮಾಡಿದ ತಕ್ಷಣ ಸಂಪರ್ಕದಲ್ಲಿರುವಂತೆ ದಿನದ 24 ಗಂಟೆಗಳ ಕಾಲ ಸಂಪರ್ಕಕ್ಕೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ತಾಲೂಕಾ ಅಧಿಕಾರಿಗಳಿಗೆ ಮತ್ತು ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಈ ವೇಳೆ ಕುಲಸಚಿವ ಹಾಗೂ ತಾಲೂಕಾ ಉಸ್ತುವಾರಿ ಅಧಿಕಾರಿ ಶಂಕರಗೌಡ ಸೋಮನಾಳ, ತಹಾಸೀಲ್ದಾರ್‌ ಬಲರಾಮ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

---------------------------------------------------

ಕೋಟ್‌

ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಮೊಬೈಲ್‌ನ್ನು ಸ್ವೀಚ್ ಆಪ್ ಆಗದಂತೆ ನೋಡಿಕೊಳ್ಳಬೇಕು. ಕರೆ ಮಾಡಿದ ತಕ್ಷಣ ಸಂಪರ್ಕದಲ್ಲಿರಬೇಕು. ದಿನದ 24 ಗಂಟೆಗಳ ಕಾಲ ಸಂಪರ್ಕಕ್ಕೆ ಸಿಗುವಂತೆ ನೋಡಿಕೊಳ್ಳಬೇಕು. ಸಂಬಂಧಿಸಿದ ಗ್ರಾಮದಲ್ಲಿ ಹಾಜರಿದ್ದು, ಪರಿಸ್ಥಿತಿ ಕುರಿತು ಮಾಹಿತಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಬೇಕು. ಲೋಪವಾದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು.ಟಿ.ಭೂಬಾಲನ್‌, ಜಿಲ್ಲಾಧಿಕಾರಿ-------------------------------------ಬಾಕ್ಸ್‌

ಪ್ರವಾಹ ನಿರ್ವಹಣೆಗೆ ನೋಡಲ್‌ ಅಧಿಕಾರಿಗಳ ನೇಮಕವಿಜಯಪುರ: ಭೀಮಾ ಹಾಗೂ ಕೃಷ್ಣಾ ನದಿ ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ, ತುರ್ತು ಸಂದರ್ಭಗಳಲ್ಲಿ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ರಕ್ಷಣಾ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್‌ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ.ವಿಜಯಪುರ: ತಾಲೂಕಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮೊ: 9739582619, ಬಬಲೇಶ್ವರ ತಾಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ಪೂಜಾರಿ ಮೊ: 9844849238, ತಿಕೋಟಾ ತಾಲೂಕಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಕುಮಾರ ಭಾವಿದೊಡ್ಡಿ ಮೊ: 9448999232, ಬಸವನ ಬಾಗೇವಾಡಿ ತಾಲೂಕಿಗೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಮೊ: 9448392005, ಕೊಲ್ಹಾರ ತಾಲೂಕಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ಮೊ: 9448544086, ನಿಡಗುಂದಿ ತಾಲೂಕಿಗೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಮೊ: 8861308444, ಮುದ್ದೇಬಿಹಾಳ ತಾಲೂಕಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಮೊ: 9448336439, ತಾಳಿಕೋಟೆ ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಮೊ: 9448776663, ಇಂಡಿ ತಾಲೂಕಿಗೆ ಭೂ ದಾಖಲೆಗಳ ಉಪನಿರ್ದೇಶಕ ಮಹಾಂತೇಶ ಮುಳಗುಂದ ಮೊ: 9742971570, ಚಡಚಣ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಮೊ: 984485041, ಸಿಂದಗಿ ತಾಲೂಕಿಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯ ಪಾಟೀಲ ಮೊ: 8951420399, ದೇವರಹಿಪ್ಪರಗಿ ತಾಲೂಕಿಗೆ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮೊ: 9480857004 ಹಾಗೂ ಆಲಮೇಲ ತಾಲೂಕಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ ಮೊ: 9008878089 ಇವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

ಈ ಅಧಿಕಾರಿಗಳು ಪ್ರವಾಹ ಸಂದರ್ಭದಲ್ಲಿ 24 ಗಂಟೆಯೂ ಸಂಬಂಧಿಸಿದ ಗ್ರಾಮದಲ್ಲಿ ಹಾಜರಿದ್ದು, ಪರಿಸ್ಥಿತಿ ಕುರಿತು ಮಾಹಿತಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಬೇಕು. ಯಾವುದೇ ಲೋಪವಾದಲ್ಲಿ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌