ಬಡವರ ಹಿತವೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶ: ಶಾಸಕ ಹಂಪನಗೌಡ ಬಾದರ್ಲಿ

KannadaprabhaNewsNetwork |  
Published : Sep 07, 2026, 01:15 AM IST
5ಕೆಪಿಎಸ್ಎನ್ಡಿ2:  | Kannada Prabha

ಸಾರಾಂಶ

ಬಡವರ ಹಿತವೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಇಂದು ಗಾಂಧಿನಗರದಲ್ಲಿ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ 25 ಕಂದಾಯ ಗ್ರಾಮಗಳಲ್ಲೂ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಬಡವರ ಹಿತವೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಇಂದು ಗಾಂಧಿನಗರದಲ್ಲಿ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ 25 ಕಂದಾಯ ಗ್ರಾಮಗಳಲ್ಲೂ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ತಾಲೂಕಿನ ಗಾಂಧಿನಗರ ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷ್ಣ ಭೈರೇಗೌಡ ಅವರು ಕಂದಾಯ ಇಲಾಖೆ ಸಚಿವರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಇಲಾಖೆಯಲ್ಲಿದ್ದ ಸಮಸ್ಯೆಗಳಿಗೆ ಹೊಸ ತಂತ್ರಜ್ಞಾನದ ಮೂಲಕ ಪರಿಹರಿಸಿ ಹೊಸ ರೂಪ ಕೊಟ್ಟಿದ್ದಾರೆ. ಫಲಾನುಭವಿಗಳಿಗೆ ಡಿಜಿಟಲ್ ಹಕ್ಕುಪತ್ರ ನೀಡಿ ನಕಲು ಆಗದಂತೆ ಕ್ರಮ ವಹಿಸಿದ್ದಾರೆ. ಈ ಹಕ್ಕುಪತ್ರದಿಂದ ಬ್ಯಾಂಕ್ ಸಾಲ ಸಹ ಪಡೆದುಕೊಳ್ಳಬಹುದು ಎಂದು ಹೇಳಿದರು.

ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ, ಕೃಷ್ಣ ಭೈರೇಗೌಡರು ಕಂದಾಯ ಸಚಿವರಾಗಿದ್ದಾಗ ಶಾಸಕ ಹಂಪನಗೌಡರ ನಿರಂತರ ಪ್ರಯತ್ನದಿಂದ ಸಿಂಧನೂರು ತಾಲೂಕಿನಲ್ಲಿ 25 ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿದ್ದು, 1100 ಬಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗಿದೆ. ಇದು ರಾಯಚೂರು ಜಿಲ್ಲೆಯಲ್ಲಿಯೇ ಅತಿಹೆಚ್ಚು. ಜಾಲಿಹಾಳ ಹೋಬಳಿ ವ್ಯಾಪ್ತಿಯ ಸತ್ಯನಾರಾಯಣ ಕ್ಯಾಂಪ್, ತಾಯಮ್ಮ ಕ್ಯಾಂಪ್, ವೆಂಕಟೇಶ್ವರ ಕ್ಯಾಂಪ್, ಸತ್ಯವತಿ ಕ್ಯಾಂಪ್, ದುರ್ಗಾಕ್ಯಾಂಪ್, ಹನುಮಾಪುರ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಹೆಸರುಗಳನ್ನು ಬದಲಾಯಿಸಲಾಗಿದೆ ಎಂದು ಹೇಳಿದರು.

ಹನುಮಾಪುರ ಗ್ರಾಮದಲ್ಲಿ ಅಕ್ರಮವಾಗಿ ಕೆಲವರು ವಾಸವಾಗಿದ್ದು, ಅದನ್ನು ಸಕ್ರಮಗೊಳಿಸಿ ಜಿಲ್ಲಾಧಿಕಾರಿಗಳು ಅನುಮತಿ ನೀಡಬೇಕಾಗಿದೆ. ಡಿಜಿಟಲ್ ಹಕ್ಕುಪತ್ರಗಳನ್ನು ಸಬ್‌ರಿಜಿಸ್ಟರ್ ಕಚೇರಿ ನೋಂದಣಿ ಮಾಡಿಸಿ ಗ್ರಾಮ ಪಂಚಾಯಿತಿ ಕಚೇರಿಯ ಇ-ಸ್ವತ್ತಿನಲ್ಲಿ ಸೇರ್ಪಡೆ ಮಾಡಲಾಗಿದೆ. ಇದರಿಂದ ಫಲಾನುಭವಿಗಳಿಗೆ ತೊಂದರೆ ಆಗುವುದನ್ನು ತಡೆಯಬಹುದು ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ 167 ಫಲಾನುಭವಿಗಳಿಗೆ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಮುಖಂಡರು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರು ಪೂರೈಸಲು ಒತ್ತಾಯಿಸಿ ರಸ್ತೆ ತಡೆ ಚಳುವಳಿ
ಹೋರಾಟದ ಹಾದಿ ಹಿಡಿದಾದರು ಬರ ಪರಿಹಾರ ಪಡೆಯುತ್ತೇವೆ: ಸಚಿವ ಯತೀಂದ್ರ ಸಿದ್ದರಾಮಯ್ಯ