ರಥ ಎಳೆದು ಸಂಭ್ರಮಿಸಿದ ಮಹಿಳೆಯರು

KannadaprabhaNewsNetwork |  
Published : Dec 05, 2024, 12:33 AM IST
ಭದ್ರಕಾಳಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದಲ್ಲಿ ಮಂಗಳವಾರ ಶ್ರೀವೀರಭದ್ರ ದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯಂತ ವಿಶಿಷ್ಟವಾಗಿ ಇಲ್ಲಿ ಮಹಿಳೆಯರೆ ರಥವನ್ನು ಎಳೆಯುವುದು ವಾಡಿಕೆ.

ಕನ್ನಡಪ್ರಭ ವಾರ್ತೆ ಸಿಂದಗಿ

ಪಟ್ಟಣದಲ್ಲಿ ಮಂಗಳವಾರ ಶ್ರೀವೀರಭದ್ರ ದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯಂತ ವಿಶಿಷ್ಟವಾಗಿ ಇಲ್ಲಿ ಮಹಿಳೆಯರೆ ರಥವನ್ನು ಎಳೆಯುವುದು ವಾಡಿಕೆ.ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಆರು ವರ್ಷರ್ಗಳಿಂದ ಮಹಿಳೆಯರೇ ಈ ರಥವನ್ನು ಎಳೆಯುವ ಸಂಪ್ರದಾಯಕ್ಕೆ ವಿಶೇಷ ಮನ್ನಣೆ ನೀಡಲಾಗಿದೆ. ರಥದ ಬೆಳ್ಳಿ ಪೀಠದಲ್ಲಿ ರಾರಾಜಿಸುತ್ತಿದ್ದ ವೀರಭದ್ರ ದೇವರು ಮತ್ತು ಭದ್ರಕಾಳಿ ಅಮ್ಮನವರ ಉತ್ಸವ ಮೂರ್ತಿಗಳೊಂದಿಗೆ ಸಾಗಿದ ರಥ ಮತ್ತು ಬೆಳ್ಳಿ ಪಲ್ಲಕ್ಕಿ, ನಗರದ ಸಾರಂಗಮಠದಿಂದ ಗಚ್ಚಿನಮಠದ ಚನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಅವರಣದಲ್ಲಿರುವ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ ತೆರಳಿತು.ದೇವಸ್ಥಾನದ ಬೆಳ್ಳಿ ಪಲ್ಲಕ್ಕಿಯೊಂದಿಗೆ ಅಗ್ನಿ ಪ್ರವೇಶ ಮಾಡಲಾಯಿತು. ರಥೋತ್ಸವದಲ್ಲಿ ಕೊಣ್ಣೂರಿನ ಹೊರಗಿನಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಪಾಳ ಮಠದ ಡಾ.ಗುರುಮೂರ್ತಿ ಶಿವಾಚಾರ್ಯರು, ಯಂಕಂಚಿ ಹಿರೇಮಠದ ಅಭಿನವ ರುದ್ರಮನಿ ಶಿವಾಚಾರ್ಯರು, ಕನ್ನೊಳ್ಳಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ಕಲಕೇರಿ ಪಂಚರಂಗ ಸಂಸ್ಥಾನಮಠದ ಶ್ರೀ ಮಡಿವಾಳೇಶ್ವರ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ ಸೇರಿದಂತೆ ತಾಲೂಕಿನ ವಿವಿಧ ಮಠದ ಶ್ರೀಗಳು, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಅಶೋಕ ವಾರದ, ಸೋಮನಗೌಡ ಬಿರಾದಾರ, ದಯಾನಂದಗೌಡ ಬಿರಾದಾರ, ರವಿ ಗೋಲಾ, ಎಸ್.ಎಂ ಬಿರಾದಾರ, ಡಾ.ಶರಣಬಸವ ಜೋಗುರ, ಚನ್ನು ಕತ್ತಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಮುತ್ತು ಮುಂಡೇವಾಡಗಿ, ಶ್ರೀಶೈಲ ನಂದಿಕೋಲ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಎಲ್ಲ ಸಿಬ್ಬಂದಿ, ತಾಲೂಕಿನ ಶ್ರೀಮಠದ ಭಕ್ತರು ಜಿ.ಪಿ.ಪೋರವಾಲ್ ಮತ್ತು ಆರ್.ಡಿ.ಪಾಟೀಲ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ