ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಮಹತ್ವದ್ದು

KannadaprabhaNewsNetwork |  
Published : Sep 24, 2024, 01:48 AM IST
23ಕೆಪಿಎಸ್ಎನ್ಡಿ1 | Kannada Prabha

ಸಾರಾಂಶ

ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಸಿಂಧನೂರು

ನಗರದ ಸ್ವಚ್ಛತೆ ಹಾಗೂ ಜನರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಪಟ್ಟಣದ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಪೌರಾಡಳಿತ ಇಲಾಖೆ, ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ತಾಲೂಕು ಘಟಕ ಸಹಯೋಗದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರದ ಬಪ್ಪೂರು ರಸ್ತೆಯಲ್ಲಿರುವ 18 ಎಕರೆ ಜಾಗದಲ್ಲಿ ನಿರ್ಮಿಸಲಿರುವ 3 ಸಾವಿರ ಮನೆಗಳಲ್ಲಿ ನಗರಸಭೆಯ 136 ಪೌರ ಕಾರ್ಮಿಕರಿಗೆ ಶಾಶ್ವತವಾಗಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಜೊತೆಗೆ ನಗರಸಭೆ ಅಧಿಕಾರಿಗಳಿಗೆ ಬೇರೆಡೆ ಪ್ರತ್ಯೇಕವಾಗಿ ವಸತಿ ಗೃಹಗಳನ್ನು ನಿರ್ಮಿಸಲು ಡಿಪಿಆರ್ ತಯಾರಿಸಿ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಿದರೆ, ತಾವು ಅಧ್ಯಕ್ಷರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಎಂಎಲ್‌ಸಿ ಬಸನಗೌಡ ಬಾದರ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ವಿಮಾ ಬಾಂಡ್, ₹7 ಸಾವಿರ ಹೆಚ್ಚುವರಿ ಬೋನಸ್ ಹಾಗೂ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಪೌರಾಯುಕ್ತ ಮಂಜುನಾಥ ಗುಂಡೂರು, ಸದಸ್ಯ ಕೆ.ಜಿಲಾನಿಪಾಷಾ ಮಾತನಾಡಿದರು. ಮಾಜಿ ಉಪಾಧ್ಯಕ್ಷ ಮುರ್ತುಜಾ ಹುಸೇನ್, ಸದಸ್ಯರಾದ ಶೇಖರಪ್ಪ ಗಿಣಿವಾರ, ವೀರೇಶ ಹಟ್ಟಿ, ಆಲಂಸಾಬ, ಮಹಿಬೂಬ್ ಡೋಂಗ್ರಿ, ಮಂಜುಳಾ ಪ್ರಭುರಾಜ್, ಸರಿತಾ ವೆಂಕಟೇಶ ಬಂಡಿ, ಶಂಶಾದಾಬೇಗಂ, ಮುಖಂಡರು, ಅಧಿಕಾರಿ, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಂದ್ರಮೌಳೇಶ್ವರ ಸನ್ನಿಧಾನದಲ್ಲಿ ಪ್ರದೋಷ ಸಪ್ತರ್ಷಿ ಪೂಜೆ
ಪರಮೇಶ್ವರ್ ಸಿಎಂ ಆಗಲಿ: ಮಠಾಧೀಶರ ಒತ್ತಾಯ