ಕನ್ನಡಪ್ರಭ ವಾರ್ತೆ ಬೆಳಗಾವಿ
ಹಿಂದವಾಡಿಯ ಗುರುದೇವ ರಾನಡೆ ಮಂದಿರದಲ್ಲಿ ಸೋಮವಾರ ಭಗವದ್ಗೀತೆ ಅಭಿಯಾನ ಸಮಿತಿ, ಜನಕಲ್ಯಾಣ ಟ್ರಸ್ಟ್ ಹಾಗೂ ಎಸಿಪಿಆರ್ ಸಹಯೋಗದಲ್ಲಿ ನಡೆದ ಗೀತಾ ಸಮನ್ವಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿಸ್ವಾರ್ಥದಿಂದ ಮೂಲ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಅತ್ಯಂತ ಸ್ತುತ್ಯಾರ್ಹ. ಬೆಳಗಾವಿಯಲ್ಲಿ ಭಗವದ್ಗೀತೆ ಅಭಿಯಾನ ನಡೆಸುತ್ತಿರುವುದು ಬಹಳ ದೊಡ್ಡ ಕೆಲಸ. ಡಿ.23ರಂದು ನಡೆಯಲಿರುವ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಜನತೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸ್ವರ್ಣವಲ್ಲೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಭಗವದ್ಗೀತೆಯ ತತ್ವದ ಅಡಿಯಲ್ಲಿ ಎಲ್ಲ ಸಿದ್ಧಾಂತಗಳನ್ನು ಒಂದೇ ಕಡೆ ತರುವ ಪ್ರಯತ್ನದ ಭಾಗವಾಗಿ ಗೀತಾ ಸಮನ್ವಯ ನಡೆಸಲಾಗುತ್ತಿದೆ. ಎಲ್ಲದಕ್ಕೂ ಅದರದ್ದೇ ಆದ ಸ್ಥಾನ ಇರಬೇಕು. ಆದರೆ, ಅವೆಲ್ಲದರ ಮಧ್ಯೆ ಹೊಂದಾಣಿಕೆ ಇರಬೇಕು. ಅದೇ ಸಮನ್ವಯ ಎಂದರು.ತತ್ವಶಾಸ್ತ್ರಗಳಲ್ಲಿ ಕೂಡ ಪರಸ್ಪರ ಹೊಂದಾಣಿಕೆ ಇರುತ್ತದೆ. ದ್ವೈತ, ಅದ್ವೈತ, ವಿಶಿಷ್ಟಾದ್ವೈತ ತತ್ವಗಳ ಮೇಲೆ ಇಲ್ಲಿ ವಿಷಯ ಮಂಡನೆ ನಡೆಯುತ್ತದೆ. ಈ ಮೂರೂ ಪ್ರಕಾರದ ಚಿಂತನೆಗಳಲ್ಲಿ ಹೊಂದಾಣಿಕೆ ಇರುತ್ತದೆ. ಆ ಕುರಿತ ಚರ್ಚೆಯೇ ಗೀತಾ ಸಮನ್ವಯ. ಎಲ್ಲರಿಗೂ ಅವರವರ ಮತಗಳ ಬಗ್ಗೆ ಗೌರವ ಇರಬೇಕು. ಆದರೆ ಬೇರೆ ಮತಗಳ ಬಗ್ಗೆ ಗೌರವ, ಸಮನ್ವಯ ಇರಬೇಕು ಎಂದು ಸಲಹೆ ನೀಡಿದರು.
ಮೈಸೂರಿನ ಭಾರತಿ ಯೋಗಧಾಮದ ಯೋಗ ರತ್ನ ಡಾ.ಕೆ.ಎಲ್.ಶಂಕರನಾರಾಯಣ ಜೋಯಿಸ್ ಸಮಾರೋಪ ಭಾಷಣ ಮಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿದ್ವಾನ್ ಸೂರ್ಯನಾರಾಯಣ ಭಟ್, ಎಸಿಪಿಆರ್ ಗೌರವ ಕಾರ್ಯದರ್ಶಿ ಎಂ.ಬಿ.ಜಿರಲಿ, ರಾಮ ಭಂಡಾರಿ, ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ.ಹೆಗಡೆ, ಸೀತಾರಾಮ ಭಾಗವತ, ಶ್ರೀಧರ ಗುಮ್ಮಾನಿ, ವೆಂಕಟ್ರಮಣ ಹೆಗಡೆ, ಗಣೇಶ ಹೆಗಡೆ, ಅರುಣ ನಾಯ್ಕ್, ಸುಬ್ರಹ್ಮಣ್ಯ ಹೆಗಡೆ, ಸಿ.ಜಿ.ಶಾಸ್ತ್ರಿ, ಶ್ರೀಪಾದ ಭಟ್, ವಿನಾಯಕ ಹೆಗಡೆ ಮೊದಲಾದವರಿದ್ದರು. ಅಭಿಯಾನ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಭಟ್ ಹಾಗೂ ಉಪಾಧ್ಯಕ್ಷೆ ಪೂರ್ಣಿಮಾ ಹೆಗಡೆ ನಿರೂಪಿಸಿದರು.