ಋಷಿ ಸಂಸ್ಕೃತಿ ಗುರುಕುಲ ಸಂಸ್ಥಾನದ ಕಾರ್ಯ ಶ್ಲಾಘನೀಯ

KannadaprabhaNewsNetwork |  
Published : Sep 03, 2024, 01:35 AM IST
ನಗರದ ಕೆಳಗೋಟೆಯ ಸರ್ಕಾರಿ ಶಾಲೆಯಲ್ಲಿ   ನಿವೃತ್ತಿ ಹೊಂದಿದ ಸಹ ಶಿಕ್ಷಕಿ  ಜಿ.ಕೆ. ಶಕುಂತಲ ಅವರನ್ನು  ಬಾಗಿನದೊಂದಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ಶತಮಾನೋತ್ಸವದಲ್ಲಿರುವ ಚಿತ್ರದುರ್ಗ ನಗರದ ಕೆಳಗೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಮಾಡಿ ಮಾದರಿ ಶಾಲೆಯಾಗಿ ಮಾಡಲು, ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ಶತಮಾನೋತ್ಸವದಲ್ಲಿರುವ ಚಿತ್ರದುರ್ಗ ನಗರದ ಕೆಳಗೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಮಾಡಿ ಮಾದರಿ ಶಾಲೆಯಾಗಿ ಮಾಡಲು, ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.

ನಗರದ ಕೆಳಗೋಟೆಯ ಸರ್ಕಾರಿ ಶಾಲೆಯ ಶಿಕ್ಷಕಿ ಜಿಕೆ ಶಕುಂತಲ ಅವರು ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣವೆಂದರೆ ಚಾರಿತ್ರ್ಯದ ನಿರ್ಮಾಣವಾಗಿದ್ದು, ಜಗತ್ತಿನಲ್ಲಿ ಎಲ್ಲರಿಗಿಂತ ವಿದ್ಯೆಯನ್ನು ಕಲಿಸುವ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಠತೆ ಹೊಂದಿದೆ. ಸರ್ಕಾರಿ ಶಾಲೆಗಳ ಶಿಕ್ಷಕ ವರ್ಗ ಕೇವಲ ಪಾಠಮಾಡುವ ಬದಲು ಶಾಲೆಯ ಅಭಿವೃದ್ಧಿಯ ಬಗ್ಗೆಯೂ ಹೆಚ್ಚು ಗಮನಹರಿಸಬೇಕು. ಈ ಶಾಲೆಯ ಮಕ್ಕಳ ಹಿನ್ನೆಲೆ ನೋಡಿದಾಗ ಕಣ್ಣಂಚಿನಲ್ಲಿ ತೇವವಾಗುತ್ತದೆ. ಇಂತಹ ಮಕ್ಕಳಿಗೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಕೊಡಬೇಕು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ವರಲಕ್ಷ್ಮಿಮಾತನಾಡಿ, ಶಾಲೆಯ ಕಟ್ಟಡಗಳು, ಕಿಡಕಿ ಬಾಗಿಲು, ಮೇಲ್ಛಾವಣಿ, ಕಾಂಪೌಂಡ್, ಶೌಚಾಲಯ ಸಂಪೂರ್ಣ ಹಾಳಾಗಿದ್ದು ಮಕ್ಕಳಿಗೆ ಅಧ್ಯಯನದ ವಾತಾವರಣ ನಿರ್ಮಾಣವಾಗಬೇಕು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಆರ್ಭಟದೊಳಗೆ ನಲುಗಿ ಹೋಗಿವೆ. ಈ ಶಾಲೆಯನ್ನು ಬದಲಾವಣೆ ಮಾಡಲು ದತ್ತು ಪಡೆದ ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನಕ್ಕೆ ಎಸ್ ಡಿ ಎಂಸಿ ಸಮಿತಿ ಅಭಾರಿಯಾಗಿದೆ ಎಂದರು.ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನದ ಆಡಳಿತಾಧಿಕಾರಿ ಮಾಲತೇಶ್ ಅರಸ್ ಮಾತನಾಡಿ, ಸರ್ಕಾರಿ ಶಾಲೆ ಉಳಿಸಿ ಅಭಿಯಾನ ರಾಜ್ಯ ಮಟ್ಟದಲ್ಲಿ ನಡೆಯಲಿದ್ದು, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಹೊಸ ಬದಲಾವಣೆಗೆ ಕೈ ಹಾಕಿದೆ. ತಾಲೂಕಿಗೊಂದು ಸರ್ಕಾರಿ ಶಾಲೆಯನ್ನು ಮಾದರಿ ಮಾಡಲು ಪಣತೊಟ್ಟಿದ್ದೇವೆ. ಡಿಡಿಪಿಐ ಮತ್ತು ಬಿಇಒ ಅವರ ಮಾರ್ಗದರ್ಶನ ಅಗತ್ಯ ಎಂದರು.ಶ್ರೀ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ನಾಗಭೂಷಣ್ , ಮುಖ್ಯೋಪಾಧ್ಯಾಯ ಡಿ.ಟಿ.ಓಬಣ್ಣ ಮಾತನಾಡಿದರು. ವಯೋಸಹಜ ನಿವೃತ್ತಿ ಹೊಂದಿದ ಸಹ ಶಿಕ್ಷಕಿ ಜಿ.ಕೆ. ಶಕುಂತಲ ಅವರಿಗೆ ಬಾಗಿನದೊಂದಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. ಶಾಲೆಯ ಮಕ್ಕಳಿಂದ ಹಾಡು, ನೃತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಕಲಾವಿದ ಎಂ.ಕೆ. ಹರೀಶ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು. ಪ್ರಶಿಕ್ಷಣಾರ್ಥಿಗಳಾದ ವಿ. ಎಸ್ ಸುಷ್ಮ, ಟಿ. ತನಿಷ, ಟಿವಿ ಶೃತಿ, ಸುನೀಲ್ ಕುಮಾರ್, ವಿನಾಯಕ, ಭೂಮಿಕ, ಹೇಮಾವತಿ, ಪಲ್ಲವಿ, ಆಯಿಷ ಬಾನು ಇವರಿಗೆ ಪ್ರಶಂಶನಾ ಪತ್ರ ವಿತರಿಸಲಾಯಿತು. ಬಿ.ಎಡ್ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು