ಎನ್‌ಡಿಎ ಅಭ್ಯರ್ಥಿ ಪರ ಮತ ಯಾಚನೆ
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ದೇಶ ವಿಶ್ವವೇ ಬೆರಗಾಗುವ ರೀತಿಯಲ್ಲಿ ಅಭಿವೃದ್ಧಿ ಕಂಡಿದೆ. ದೇಶದ ಭದ್ರತೆಗೆ ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್ ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಗ್ರಾಮದ ಗ್ರಾಮ ಪಂಚಾಯಿತಿಯ 2, 3, 4ನೇ ವಾರ್ಡ್‌ಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಗ್ರಾಮದ ಚನ್ನರಾಯಪಟ್ಟಣ ಮುಖ್ಯರಸ್ತೆಯಲ್ಲಿ ಬರುವ 3ನೇ ವಾರ್ಡ್ ಕೆಂಬರುಗುಂಡಿಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಅವರು ಮಾತನಾಡಿದರು.ಜಿಲ್ಲೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಾಗಿದೆ. ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಹೋಬಳಿ ಕೇಂದ್ರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರು., ವಿವಿಧ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸುಮಾರು 10 ಕೋಟಿ ರು. ಅನುದಾನ ನೀಡಿದ್ದಾರೆ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ಕಳೆದ 3 ವರ್ಷಗಳಿಂದ ವಿಭಾಗದ ಕೆರೆಗಳನ್ನು ತುಂಬಿಸಲು ಹೆಚ್ಚು ಶ್ರಮ ವಹಿಸಿದ್ದಾರೆ ಎಂದು ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಅವರು ಹೋಬಳಿ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ಸಮುದಾಯ ಭವನ ಮತ್ತು ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೋಬಳಿ ಕೇಂದ್ರವನ್ನು ಹೆಚ್ಚು ಅಭಿವೃದ್ಧಿಪಡಿಸುವ ಸಲುವಾಗಿ ಮತದಾರರು ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ಶಿವಕುಮಾರ್, ಎನ್.ಎಸ್.ಮಂಜುನಾಥ್, ಮುಖಂಡರಾದ ಮಹಮ್ಮದ್ ಜಾವಿದ್, ಎನ್.ಆರ್.ಚಂದ್ರು, ಯಲ್ಲಪ್ಪ, ನಂಜಮ್ಮ ಮಾಳೇರ್ ಪಾಪಣ್ಣ, ಗಾರೆ ರಂಗಸ್ವಾಮಿ, ತಿಮ್ಮಣ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್.ವಿ.ಲೋಕೇಶ್, ಸತೀಶ್, ಸುಹೀಲ್, ನಾರಾಯಣಗೌಡ, ದೇವು, ಪುಟ್ಟೇಗೌಡ, ಇತರರು ಹಾಜರಿದ್ದರು.
ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮತಯಾಚಿಸಿದರು. ಮುಖಂಡರಾದ ತೋಟಿ ನಾಗರಾಜ್, ಎನ್.ಆರ್.ಶಿವಕುಮಾರ್, ಮಹಮದ್ ಜಾವಿದ್, ಎನ್.ಎಸ್ ಮಂಜುನಾಥ್, ಎನ್.ಆರ್.ಚಂದ್ರು ಪಾಲ್ಗೊಂಡಿದ್ದರು.