ದನ ಮೇಯಿಸಲು ಹೋದ ಯುವಕ ನೇಣಿಗೆ ಶರಣು

KannadaprabhaNewsNetwork |  
Published : Sep 23, 2024, 01:30 AM IST
ಫೋಟೋ-22ಕೆಡಿಬಿಪಿ6- ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸ್ಥಳದಲ್ಲಿ ಪೊಲೀಸರ ಪರಿಶೀಲನೆ. | Kannada Prabha

ಸಾರಾಂಶ

ಮೃತ ಯುವಕ ಮಾಡೇಶ್ವರ ಗ್ರಾಮದ ಸೋಮಶೇಖರ್ ಮತ್ತು ಲಕ್ಷ್ಮಮ್ಮ ದಂಪತಿಯ ಒಬ್ಬನೇ ಮಗ. ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟು ದನ ಮೇಯಿಸುತ್ತಿದ್ದ ಎಂದು ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ದನ ಮೇಯಿಸಲು ಹೋಗಿದ್ದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಮಾಡೇಶ್ವರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ಯುವಕನನ್ನು ನಿಖಿಲ್ (25) ಎಂದು ಗುರುತಿಸಲಾಗಿದೆ. ಖಾಸಗಿ ಕೈಗಾರಿಕಾ ಘಟಕವೊಂದರಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್, ಕೆಲ ದಿನಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿದ್ದ. ಆತನಿಗೆ ತಂದೆ- ತಾಯಿ ಬುದ್ಧಿಮಾತು ಹೇಳಿದ್ದರು. ಇದರಿಂದ ಮನನೊಂದ ಆತ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮೃತ ಯುವಕ ಮಾಡೇಶ್ವರ ಗ್ರಾಮದ ಸೋಮಶೇಖರ್ ಮತ್ತು ಲಕ್ಷ್ಮಮ್ಮ ದಂಪತಿಯ ಒಬ್ಬನೇ ಮಗ. ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟು ದನ ಮೇಯಿಸುತ್ತಿದ್ದ ಎಂದು ತಿಳಿದುಬಂದಿದೆ.

ಮೃತನ ಪೋಷಕರು ತಮ್ಮ ಮಗ ಕೆಲಸಕ್ಕೆ ಹೋಗಿಬರಲು ಸಾಲ ಮಾಡಿ ಬೈಕ್‌ ಕೊಡಿಸಿದ್ದರು ಎನ್ನಲಾಗಿದ್ದು, ಏಕಾಏಕಿ ಕೆಲಸ ಬಿಟ್ಟಿದ್ದನ್ನು ಪ್ರಶ್ನಿಸಿ ಮಗನಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಮಧ್ಯಾಹ್ನ ದನ ಮೇಯಿಸಲು ಹೋದಾಗ, ಕರುವಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಮರಕ್ಕೆ ನೇಣು ಬಿಗಿದುಕೊಂಡು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಡಾ.ಎಂ.ಬಿ.ನವೀನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ