ಸದೃಢ ದೇಶ ನಿರ್ಮಾಣಕ್ಕಾಗಿ ಯುವಪೀಳಿಗೆ ಕ್ರೀಡೆಯಲ್ಲಿ ಭಾಗವಹಿಸಿ

KannadaprabhaNewsNetwork |  
Published : Sep 22, 2026, 04:30 AM IST
ಬೆಳಗಾವಿ | Kannada Prabha

ಸಾರಾಂಶ

ಕ್ರೀಡೆಯ ಮೂಲಕ ಯುವಪೀಳಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ, ದೇಶ ನಿರ್ಮಾಣದಲ್ಲಿ ತಮ್ಮದೇ ಆದ ಮಹತ್ವದ ಪಾತ್ರ ವಹಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಬಸವಪ್ರಭು ಕೋರೆ ಮಹಾವಿದ್ಯಾಲಯದ ಪ್ರಾಚಾರ್ಯ ಸುಧೀರ ಕೋಟಿವಾಳೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕ್ರೀಡೆಯ ಮೂಲಕ ಯುವಪೀಳಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ, ದೇಶ ನಿರ್ಮಾಣದಲ್ಲಿ ತಮ್ಮದೇ ಆದ ಮಹತ್ವದ ಪಾತ್ರ ವಹಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಬಸವಪ್ರಭು ಕೋರೆ ಮಹಾವಿದ್ಯಾಲಯದ ಪ್ರಾಚಾರ್ಯ ಸುಧೀರ ಕೋಟಿವಾಳೆ ಹೇಳಿದರು.

ಚಿಕ್ಕೋಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅನುಷ್ಠಾನ ಅಧಿಕಾರಿ ಸಂಜಯಕುಮಾರ ನಾಯಕ ಕಾರ್ಯಕ್ರಮಕ್ಕೆ ಸ್ವಾಗತಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ. ಇಂದಿನ ಸೋಲೇ ನಾಳಿನಯ ಜಯದ ಮೆಟ್ಟಿಲು. ಕ್ರೀಡೆಯಿಂದ ದೈಹಿಕ ಮಾತ್ರ ಸದೃಢತೆಯಾಗದೇ ಮಾನಸಿಕ ಆರೋಗ್ಯ ವೃದ್ಧಿಯಾಗುವುದರೊಂದಿಗೆ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ತಿಳಿಸಿದರು.ಹಿರಿಯ ದೈಹಿಕ ಶಿಕ್ಷಕ ಅಪ್ಪಸಾಬ ಕೋಟಿವಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾಪಟುಗಳಿಗೆ ಆರ್.ಎಲ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರು ಶಿವಾನಂದ ಬುಲಬುಲಿ ಮಾರ್ಗದರ್ಶನ ನೀಡಿದರು. ಬೆಳಗಾವಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅನುಷ್ಠಾನಾಧಿಕಾರಿಗಳು ಸೇರಿದಂತೆ ಬೆಳಗಾವಿಯ ಎಚ್.ಎಸ್.ಸಿಂಗಡೆ ಉಪಸ್ಥಿತರಿದ್ದರು. ಮಹೇಶ ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಸುಮಾರು 450 ಕ್ರೀಡಾಪಟುಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ರೆ ರಾಜ್ಯಾದ್ಯಂತ ಹೋರಾಟ
೧೩ ಸಾವಿರ ಕುಟುಂಬಗಳಿಗೆ ಶಾಶ್ವತ ಮನೆ ಮಾಲೀಕತ್ವದ ಹಕ್ಕುಪತ್ರ: ಶಾಸಕ ಮಾನೆ