ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ರಂಗಭೂಮಿ ಚಟುವಟಿಕೆ ವರದಾನ

KannadaprabhaNewsNetwork |  
Published : May 13, 2026, 12:45 AM IST
12ಕೆಎಂಎನ್ ಡಿ13 | Kannada Prabha

ಸಾರಾಂಶ

ಶಾಲಾ ಮಕ್ಕಳಿಗೆ ವಿಶೇಷ ರಂಗಭೂಮಿ ತರಬೇತಿ ಶಿಬಿರ ಆಯೋಜಿಸಿ ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ರಂಗಭೂಮಿ ಚಟುವಟಿಕೆಗಳು, ನೇಪಥ್ಯಕ್ಕೆ ಸರಿಯುತ್ತಿರುವ ಮೂಡಲಪಾಯ ಯಕ್ಷಗಾನ ಕಲೆ ಬಗ್ಗೆ ವಿಶೇಷ ಆಸಕ್ತಿ ಬರುವಂತೆ ಮಾಡುತ್ತಿರುವುದು ಶ್ಲಾಘನೀಯ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ರಂಗಭೂಮಿ ಚಟುವಟಿಕೆಗಳು ವರದಾನವಾಗಿವೆ ಎಂದು ಕರ್ನಾಟಕ ಮೂಡಲಪಾಯ ಯಕ್ಷಗಾನ ಪರಿಷತ್ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಹೇಳಿದರು.

ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ರಂಗ ಮಂದಿರ ಆವರಣದಲ್ಲಿ ಬೆಂಗಳೂರಿನ ಲೋಕಾಯನ ಕಲ್ಚರಲ್ ಫೌಂಡೇಶನ್ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ವಿಶೇಷ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ, ಮೂಡಲಪಾಯ ಯಕ್ಷಗಾನ ಪ್ರಸ್ತುತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಳೆದ 15 ದಿನಗಳಿಂದ ನಡೆಯುತ್ತಿರುವ ರಂಗ ತರಬೇತಿ ಶಿಬಿರವು ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಕ್ರಿಯಾಶೀಲತೆ ಹಾಗೂ ಲವಲವಿಕೆಯನ್ನು ತುಂಬುವ ಜೊತೆಗೆ, ಮಕ್ಕಳ ಸಮಗ್ರ ವ್ಯಕ್ತಿತ್ವದ ವಿಕಸನಕ್ಕೆ ಮಾರ್ಗದರ್ಶಿಯಾಗಿವೆ ಎಂದರು.

ಶಶಿಧರ ಭಾರಿಘಾಟ್ ಅವರು ತಮ್ಮ ಹುಟ್ಟೂರಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಬೇಸಿಗೆ ರಜೆ ವೇಳೆ ತಾಲೂಕಿನ ಶಾಲಾ ಮಕ್ಕಳಿಗೆ ವಿಶೇಷ ರಂಗಭೂಮಿ ತರಬೇತಿ ಶಿಬಿರ ಆಯೋಜಿಸಿ ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ರಂಗಭೂಮಿ ಚಟುವಟಿಕೆಗಳು, ನೇಪಥ್ಯಕ್ಕೆ ಸರಿಯುತ್ತಿರುವ ಮೂಡಲಪಾಯ ಯಕ್ಷಗಾನ ಕಲೆ ಬಗ್ಗೆ ವಿಶೇಷ ಆಸಕ್ತಿ ಬರುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಆಂಧ್ರಪ್ರದೇಶದ ಹಿರಿಯ ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಮಾತನಾಡಿ, ಮೂಡಲಪಾಯ ಯಕ್ಷಗಾನದ ಬಗ್ಗೆ ಮಕ್ಕಳು, ಯುವಜನರಲ್ಲಿ ಜಾಗೃತಿ ಮೂಡಿಸಿ ಕಲೆ ಕಲಿಯಲು ರಂಗ ತಜ್ಞರಿಂದ ತರಬೇತಿ ಕೊಡಿಸಿ ತ್ರಿಪುರ ಸಂಹಾರ ಹಾಗೂ ಜಟಾಯು ಮೋಕ್ಷ ನಾಟಕವನ್ನು ಮಕ್ಕಳಿಗೆ ಕಲಿಸಿ ವೇದಿಕೆಯಲ್ಲಿ ಪ್ರದರ್ಶಿಸಲು ಅವಕಾಶ ನೀಡಿದ್ದು ಶ್ಲಾಘನೀಯ ಎಂದರು.

ಸಾಹಿತಿ ಮಹಮದ್ ಅಜರುದ್ದಿನ್ ರಚಿಸಿರುವ ನನ್ನ ಕೃತಿ ಬಿಡುಗಡೆ ಮಾಡಿದ ಮೈಸೂರಿನ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಪ್ರೊ.ಮಾರುತಿ ಪ್ರಸನ್ನ, ಅಕ್ಕಿ ಹೆಬ್ಬಾಳು ಗ್ರಾಮದ ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಕವನಗಳು, ತಾಯಿ ಪ್ರೀತಿ, ತಂದೆ ಬಂಧುತ್ವ ಸೇರಿದಂತೆ ತಮ್ಮ ಜೀವನಾನುಭವಗಳ ಕುರಿತ ಕವನಗಳು ಹಾಗೂ ಲೇಖನಗಳನ್ನು ಬರೆದು ನನ್ನ ವಿಳಾಸ ಕೃತಿ ರಚಿಸಿ ಮಕ್ಕಳು ಹಾಗೂ ಯುವ ಜನರಿಗೆ ಜಾಗೃತಿ ಮೂಡಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎ.ಎಸ್.ಚಂದ್ರಶೇಖರ್, ಕನ್ನಡ ಚಲನಚಿತ್ರ ಛಾಯಾನಿರ್ದೇಶಕ ರಾಮಚಂದ್ರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ವಾಸು, ಹೇಮಾವತಿ ಹೊನ್ನಾವರು ವೇದಿಕೆ ಸದಸ್ಯರಾದ ಮಹಾಲಿಂಗು, ಎ.ಸಿ.ಮಂಜೇಗೌಡ, ಸರ್ಕಾರಿ ಪ್ರೌಢಶಾಲೆ ಹಿರಿಯ ಮುಖ್ಯ ಶಿಕ್ಷಕ ಎಸ್.ಚಲುವರಾಜು, ಗ್ರಾಪಂ ಸದಸ್ಯ ದಡದಹಳ್ಳಿ ಅತೀಕ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಠಲ್ ರಾವ್, ಜಾನಪದ ಪರಿಷತ್ ಅಧ್ಯಕ್ಷ ಕತ್ತರಘಟ್ಟ ವಾಸು, ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಮಾಜಿ ಅಧ್ಯಕ್ಷ ಕೆ.ಎಸ್. ಸೋಮಶೇಖರ್, ಗ್ರಾಮದ ಮುಖಂಡರಾದ ಎಸ್. ದಿವಾಕರ್ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂದುವರೆದ ಚಿರತೆ ಉಪಟಳ: ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ
ಸರ್ಕಾರಿ ಕಚರಿಗಳಲ್ಲಿ ಕಡತಗಳ ಪರಿಶೀಲನೆ, ಸಮಗ್ರ ತನಿಖೆ ನಡೆಯಲಿ: ಕಿರಂಗೂರು ಪಾಪು