ಕನ್ನಡಪ್ರಭ ವಾರ್ತೆ ಮೈಸೂರು
ನಗರದ ರಂಗಾಯಣದ ಬಿ.ವಿ. ಕಾರಂತರ ರಂಗಚಾವಡಿಯಲ್ಲಿ ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ರಂಗಭೂಮಿ ಮತ್ತು ಜನಪದ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ರಂಗಭೂಮಿ ಬದುಕಿನ ಅನುಭವ, ಜೀವನ ಪಾಠವನ್ನು ಕಲಿಸುತ್ತದೆ. ಪ್ರಸ್ತುತ ಪೂರ್ಣ ಪ್ರಮಾಣದಲ್ಲಿ ರಂಗಭೂಮಿಯಲ್ಲಿ ಸಕ್ರಿಯವಾಗುವುದು ಕಷ್ಟಕರ. ಇದರಿಂದಾಗಿ ಹವ್ಯಾಸಿ ರಂಗಭೂಮಿ ತಂಡಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಉತ್ತಮ ಬೆಳವಣಿಗೆ ಎಂದರು.ರಂಗಾಯಣದ ಮಾಡಬೇಕಾದ ಕೆಲಸವನ್ನು ಹವ್ಯಾಸ ರಂಗಭೂಮಿ ತಂಡಗಳು ಮಾಡುತ್ತಿವೆ. ಹವ್ಯಾಸಿ ರಂಗಭೂಮಿ ತಂಡಗಳು ರಂಗ ಶಿಬಿರಗಳ ಮೂಲಕ ಸಾಂಸ್ಕೃತಿಕ ಲೋಕದಲ್ಲಿ ಸಣ್ಣ ಬೀಜಗಳನ್ನು ಬಿತ್ತುತ್ತಿವೆ. ಇದು ಭವಿಷ್ಯದಲ್ಲಿ ಮೈಸೂರಿನ ಸಾಂಸ್ಕೃತಿಕ ಲೋಕ ವಿಕಾಸಗೊಳಿಸಲಿದೆ. ಹೊಸ ಪ್ರತಿಭೆಗಳ ಉದಯಕ್ಕೂ ಕಾರಣವಾಗಲಿದೆ ಎಂದು ಅವರು ಹೇಳಿದರು.
ರಾಜೇಶ್ವರಿ ವಸ್ತ್ರಾಲಂಕಾರದ ಮಾಲೀಕ ಬಿ.ಎಂ. ರಾಮಚಂದ್ರ ಮಾತನಾಡಿ, ರಂಗಭೂಮಿಯಲ್ಲಿ ಸುಲಭವಾಗಿ ಅವಕಾಶ ದೊರೆಯುವುದಿಲ್ಲ. ಹೀಗಾಗಿ, ಸಿಕ್ಕಿರುವ ಅವಕಾಶವನ್ನು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ತಲಕಾಡು ಇದ್ದರು. ಉಪನ್ಯಾಸಕ ಡಾ. ಶ್ರೀಧರಮೂರ್ತಿ ನಿರೂಪಿಸಿದರು.