ಥೀಂ ಪಾರ್ಕ್‌ ಹಗರಣ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork | Published : Jul 24, 2024 12:29 AM

ಸಾರಾಂಶ

ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ನಾಯಕ ಮುನಿಯಾಲು ಉದಯ್ ಶೆಟ್ಟಿ ನೇತೃತ್ವದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಐವನ್ ಡಿಸೋಜಾ, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಿಥುನ್ ರೈ, ಎಂ.ಎ. ಗಫೂರ್, ಸುಧೀರ್ ಕುಮಾರ್ ಮುರೋಳ್ಳಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ರಕ್ಷಿತ್ ಶಿವರಾಮ್, ಇನಾಯತ್ ಆಲಿ, ಹರೀಶ್ ಕುಮಾರ್, ಅಶೋಕ್ ಕುಮಾರ್ ಕೊಡವೂರು, ದೇವಿಪ್ರಸಾದ್ ಶೆಟ್ಟಿ ಬೆಳಪು, ಮುರಳಿ ಶೆಟ್ಟಿ, ಸುರೇಂದ್ರ ಶೆಟ್ಟಿ, ಶುಭದ ರಾವ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ್ ಕಾಂಚನ್, ದಿನಾಕರ್ ಹೇರೂರು, ಸದಾಶಿವ ಸುಭಿತ್, ದೇವಾಡಿಗ, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಪ್ರದೀಪ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಕೃಪಾ ಆಳ್ವಾ, ಎಸಿ ವಿನಯ್‌ರಾಜ್, ಪ್ರವೀಣ್ ಚಂದ್ರ ಆಳ್ವಾ ಮತ್ತಿತರರಿದ್ದರು.ಆ ಬಳಿಕ ನಾಯಕರೆಲ್ಲರೂ ವಿಧಾನಸೌಧಕ್ಕೆ ತೆರಳಿ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣಕ್ಕೆ ವಿಶೇಷ ತನಿಖಾ ದಳ (SIT)‌ ರಚಿಸಿ ತನಿಖೆ ಮಾಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

Share this article