ಜೂ.3ರಂದು 6 ವಿಪ ಸ್ಥಾನಗಳಿಗೆ ಚುನಾವಣೆ: ಜಿಲ್ಲಾಧಿಕಾರಿ ಮಾಹಿತಿ

KannadaprabhaNewsNetwork | Published : May 3, 2024 1:03 AM

ಸಾರಾಂಶ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ದಾವಣಗೆರೆ ಜಿಲ್ಲೆ 2 ಶಿಕ್ಷಕರ ಕ್ಷೇತ್ರ ಹಾಗೂ 1 ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂ.3ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

- ದ್ವೈವಾರ್ಷಿಕ ಚುನಾವಣೆ: ಜಿಲ್ಲೆಯಲ್ಲಿ 2 ಶಿಕ್ಷಕರ ಕ್ಷೇತ್ರ, 1 ಪದವೀಧರ ಕ್ಷೇತ್ರ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ದಾವಣಗೆರೆ ಜಿಲ್ಲೆ 2 ಶಿಕ್ಷಕರ ಕ್ಷೇತ್ರ ಹಾಗೂ 1 ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂ.3ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಜೂನ್ 21ರಂದು ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯ ಆಗಲಿದೆ. ಆದ್ದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮೇ 16 ರವರೆಗೆ ನಾಮಪತ್ರಗಳ ಸಲ್ಲಿಸಲು ಕೊನೆಯ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ, ಮೇ 20ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನ.

ಜೂ.3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6ರಂದು ನಡೆಯಲಿದೆ. ಜೂ.12ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಪ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ನೀತಿಸಂಹಿತೆ ಜಾರಿಯಲ್ಲಿರುತ್ತದೆ.

ಜಿಲ್ಲೆಯಲ್ಲಿ 3 ಸದಸ್ಯರ ಆಯ್ಕೆಗೆ ಚುನಾವಣೆ:

ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿವೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ:

ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ.

ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ:

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ ಎಂದು ಡಿಸಿ ತಿಳಿಸಿದ್ದಾರೆ.

- - - -2ಕೆಡಿವಿಜಿ41ಃ: ಡಾ. ಎಂ.ವಿ. ವೆಂಕಟೇಶ್

Share this article