ಕನ್ನಡಪ್ರಭ ವಾರ್ತೆ ಬನ್ನೂರು
ಅಧ್ಯಕ್ಷರಾಗಿ ಕೃಷ್ಣೇಗೌಡ, ಉಪಾಧ್ಯಕ್ಷರಾಗಿ ಬಿಜೆಪಿಯ ನಾಗರತ್ನ ಅವಿರೋಧ ಆಯ್ಕೆಯಾದರು.ಬನ್ನೂರು ಪುರಸಭೆಯಲ್ಲಿ 23 ಸದಸ್ಯರಿದ್ದು, ಜೆಡಿಎಸ್- 12, ಕಾಂಗ್ರೆಸ್- 6, ಬಿಜೆಪಿ-2 , ಪಕ್ಷೇತರರು-2 ಸದಸ್ಯರನ್ನು ಹೊಂದಿದ್ದು, ಶುಕ್ರವಾರ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನವು ಬಿಸಿಬಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಬಿಸಿಎಡಬ್ಲ್ಯೂಗೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ಕೃಷ್ಣೇಗೌಡ ಉಪಾಧ್ಯಕ್ಷ ಸ್ಥಾನಕ್ಕೆ ನಾಗರತ್ನ ಪ್ರಭಾಕರ್ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣೇಗೌಡ ಮಾತನಾಡಿ, ಬನ್ನೂರು ಪುರಸಭೆಗೆ ತಾವು 2ನೇ ಭಾರೀ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಮ್ಮ ಅಧಿಕಾರವಧಿಯಲ್ಲಿ ಎಲ್ಲ ಸದಸ್ಯರ ಸಹಕಾರವನ್ಬು ಪಡೆದುಕೊಂಡು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.ತಮ್ಮ ಆಯ್ಕೆಗೆ ಸಹಕಾರವನ್ನು ನೀಡಿದ ಮಾಜಿ ಶಾಸಕ ಎಂ. ಅಶ್ವಿನ್ ಕುಮಾರ್ ಅವರನ್ನು ಹಾಗೂ ಪುರಸಭೆಯ ಸದಸ್ಯರಿಗೆ ಕೃತಜ್ಞತೆಯನ್ನು ಅರ್ಪಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿನಂದಿಸಿದರು. ಮಾಜಿ ಶಾಸಕ ಎಂ. ಅಶ್ವಿನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿದಂತೆ ಪುರಸಭೆಯ ಸಿಬ್ಬಂದಿಯವರು, ಪುರಸಭೆಯ ಸದಸ್ಯರು, ಜೆಡಿಎಸ್ ಬಿಜೆಪಿಯ ಕಾರ್ಯಕರ್ತರು ಇದ್ದರು.