ಕನ್ನಡಪ್ರಭ ವಾರ್ತೆ ಭಾರತೀನಗರ
ಮದ್ದೂರು- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಗ್ರಾಮ ಪಂಚಾಯಿತಿ, ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಇವುಗಳ ಸಹಯೋಗದಲ್ಲಿ ನಡೆದ ಸಂಜೀವಿನಿ ಮಾಸಿಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಹಲವು ಯೋಜನೆಗಳಿವೆ. ಇವುಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬೇಕು. ತಿಂಡಿ, ತಿನಿಸುಗಳ ಜೊತೆಗೆ ಉಡುಪುಗಳ ತಯಾರಿಗೆ ಮುಂದಾಗಿ ಮಾರುಕಟ್ಟೆ ತಂತ್ರಗಾರಿಕೆಯನ್ನು ಅರಿಯಬೇಕು ಎಂದು ಹೇಳಿದರು.ಗ್ರಾಮೀಣ ಭಾಗದಲ್ಲಿ ಸಿಗುವಂತಹ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಒಂದು ವೇದಿಕೆ ರೂಪಿಸಲಾಗಿದೆ. ಈ ಒಕ್ಕೂಟದ ಪದಾಧಿಕಾರಿಗಳು ಅತ್ಯುತ್ತಮ ಉತ್ಪನ್ನಗಳನ್ನು ಮಾರಾಟ ಮಾಡಿ ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.
ಮಾಸಿಕ ಸಂತೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಸ್ವ ಉದ್ಯೋಗ ಅಭಿಯಾನದಡಿ ಉತ್ಪಾದಿಸಿದ ಉತ್ಪನ್ನಗಳು ಮಾರಾಟ ಮೇಳದಲ್ಲಿ ಸಾರ್ವಜನಿಕರ ಗಮನ ಸೆಳೆದವು.ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಬೋರೇಗೌಡ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಸೌಭಾಗ್ಯ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಂಗಳಗೌರಿ, ಪಿಡಿಒ ಸುಧಾ, ಗ್ರಾಪಂ ಸದಸ್ಯರಾದ ಕೆ.ವಿ.ಶ್ರೀನಿವಾಸ್, ರಾಘವೇಂದ್ರ, ಮಂಜುನಾಥ್, ಎನ್‌ಆರ್‌ಎಲ್‌ಎಂ ಅಧಿಕಾರಿಗಳಾದ ರವೀಂದ್ರ,ಗೌಡ, ಅಂಬರಹಳ್ಳಿ ಸ್ವಾಮಿ, ಗುರುಲಿಂಗಸ್ವಾಮಿ. ಪ್ರದೀಪ್, ನಿತಿನ್‌ಕುಮಾರ್, ಶಶಿಕಲಾ, ವಿನುತಾ ಉಪಸ್ಥಿತರಿದ್ದರು.