ಕನ್ನಡಪ್ರಭ ವಾರ್ತೆ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಎರಡು ಅನುಮಾನಾಸ್ಪದ ಬಾಕ್ಸ್‌ಗಳಲ್ಲಿ ಯಾವುದೇ ಅಪಾಯಕಾರಿ ಸ್ಫೋಟಕ ವಸ್ತುಗಳು ಇರಲಿಲ್ಲ. ಬದಲಾಗಿ ಟೇಬಲ್ ಸಾಲ್ಟ್, ಬಿಳಿ ಪೌಡರ್, ನ್ಯೂಸ್ ಪೇಪರ್ ಮತ್ತು ತ್ಯಾಜ್ಯವಸ್ತು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮೇಡ್ ಇನ್ ಬಾಂಗ್ಲಾದೇಶ:
ವಾರಸುದಾರರಿಲ್ಲದ ಬಾಕ್ಸ್ ಗಳ ಕುರಿತು ರೈಲ್ವೆ ನಿಲ್ದಾಣದ ಆಟೋ ಚಾಲಕರು ಭಾನುವಾರ ಬೆಳಗ್ಗೆ 11 ಗಂಟೆಗೆ ಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೇಡ್ ಇನ್ ಬಾಂಗ್ಲಾದೇಶ ಎಂದು ಬಾಕ್ಸ್ ಮೇಲೆ ಬರೆದಿದ್ದರಿಂದ ಆತಂಕ ಉಂಟಾಗಿತ್ತು. ಪೊಲೀಸ್ ಸಿಬ್ಬಂದಿ, ಜಿಲ್ಲಾ ಪೊಲೀಸ್ ಇಲಾಖೆಯ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅನುಮಾನಾಸ್ಪದ ಬಾಕ್ಸ್ ಸುತ್ತಲು 250ಕ್ಕೂ ಹೆಚ್ಚು ಮರಳಿನ ಮೂಟೆಗಳನ್ನು ಇರಿಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.ಈ ವೇಳೆ ಭದ್ರತಾ ದೃಷ್ಟಿಯಿಂದ ಸಾರ್ವಜನಿಕರ ನಿಯಂತ್ರಣಕ್ಕಾಗಿ ಬಾಕ್ಸ್‌ಗಳಿದ್ದ ಸ್ಥಳದಿಂದ 100 ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಲಾಯಿತು. ಪೊಲೀಸ್ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಯಿತು. ಹೆಚ್ಚಿನ ತನಿಖೆಗೆ ಬೆಂಗಳೂರಿನ ಬಾಂಬ್ ಸ್ಕ್ವಾಡ್‌ಗೆ ಮಾಹಿತಿ ರವಾನಿಸಿದ್ದರು. ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ತಲುಪುವ ಹೊತ್ತಿಗೆ ರಾತ್ರಿ 8.30 ಗಂಟೆಯಾಗಿತ್ತು. ಕಾರ್ಯಾಚರಣೆ ಆರಂಭಿಸಿ ಸುಮಾರು 5 ಗಂಟೆಗಳ ಎಲ್ಲ ರೀತಿಯ ಪರೀಕ್ಷೆ ನಡೆಸಿದರು. ಒಳಗೆ ಯಾವುದೇ ಅಪಾಯಕಾರಿ ಸ್ಫೋಟಕ ಇಲ್ಲ ಎಂದು ಖಚಿತವಾದ ಬಳಿಕ ಬೀಗ ಒಡೆಯಲು ಯತ್ನಿಸಿದರು. ಅದು ಸಾಧ್ಯವಾಗದಾಗ ಚಿಕ್ಕ ಸ್ಫೋಟಕ ಬಳಸಿ ಮೊದಲ ಬಾಕ್ಸ್ ತೆರೆಯಲಾಯಿತು. ಬಳಿಕವೂ ಅಲ್ಲಿನ ವಸ್ತುಗಳ ಮೇಲೆ ನಾಲ್ಕು ವಿವಿಧ ಬಗೆಯ ಪರೀಕ್ಷೆ ಮಾಡಿ, ಬಾಕ್ಸ್ ಒಳಗಿರುವುದು ಸ್ಫೋಟಕ ಸಾಮಗ್ರಿಯಲ್ಲ ಎಂದು ಖಾತ್ರಿಯಾದ ಬಳಿಕ ಇನ್ನೊಂದು ಬಾಕ್ಸ್ ಅನ್ನು ಸಹ ತೆರೆಯಲಾಯಿತು.
ಕಾರ್ಯಾಚರಣೆಗೆ ಮಳೆ ಅಡ್ಡಿ:
ಪಾರ್ಕಿಂಗ್ ಸ್ಥಳಕ್ಕೆ ಹೋಗಲು ಪರದಾಟ:
- - -
ಪೌಡರ್‌ನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಚನ್ನಬಸಪ್ಪ ಶಿವಮೊಗ್ಗ: ಅನಾಮಾಧೇಯ ಎರಡು ಪೆಟ್ಟಿಗೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಬದಲಾಗಿ ಬಿಳಿ ಬಣ್ಣದ ಪೌಡರ್ ಪತ್ತೆಯಾಗಿದೆ. ದೇವರು ದೊಡ್ಡವನು, ಯಾವುದೇ ಅನಾಹುತ ಆಗಿಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಬಿಳಿ ಬಣ್ಣದ ಪೌಡರ್ ಪತ್ತೆಯಾಗಿದೆ. ಇದು ಮುಖಕ್ಕೆ ಹಚ್ಚುವ ಪೌಡರ್ ಅಂತೂ ಅಲ್ಲ, ಬೇರೆ ಯಾವ ಪೌಡರ್ ಎಂಬ ಬಗ್ಗೆ ರಿಪೋರ್ಟ್ ಬರಬೇಕು. ಇದು ಗಂಭೀರವಾದ ಸಂಗತಿಯಾಗಿದ್ದು, ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
- - -
-06kpsmg11, 12:ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಇರಿಸಿದ್ದ ಅನುಮಾನಾಸ್ಪದ ಬಾಕ್ಸ್ ಗಳನ್ನು ಬಾಂಬ್ ನಿಷ್ಟ್ರೀಯ ದಳದವರು ತೆರೆಯುತ್ತಿರುವುದು.