ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಇಡೀ ದೇಶದಲ್ಲಿ ಚರ್ಚಿಸಲಾಗುತ್ತಿದೆ. ಜೊತೆಗೆ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿ ಮಾದರಿ ಅನುಸರಿಸಲಾಗುತ್ತಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಭಾಗಮಂಡಲದಲ್ಲಿ ಶುಕ್ರವಾರ ನಡೆದ ನೂತನ ಮೇಲು ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಇಡೀ ದೇಶದಲ್ಲಿ ಚರ್ಚಿಸಲಾಗುತ್ತಿದೆ. ಜೊತೆಗೆ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿ ಮಾದರಿ ಅನುಸರಿಸಲಾಗುತ್ತಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
ಭಾಗಮಂಡಲದಲ್ಲಿ ಶುಕ್ರವಾರ ನಡೆದ ನೂತನ ಮೇಲು ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 58 ಸಾವಿರ ಕೋಟಿ ರು. ವೆಚ್ಚ ಮಾಡುತ್ತಿದೆ. ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ ಎಂದು ವಿವರಿಸಿದರು.
ಗ್ಯಾರಂಟಿ ಯೋಜನೆಗಳು ಶೇ.80 ರಷ್ಟು ಬಡಜನರಿಗೆ ತಲುಪುತ್ತಿವೆ. ಗ್ಯಾರಂಟಿ ಯೋಜನೆ ವಿರೋಧಿಸುವವರು ಸಂವಿಧಾನ ವಿರೋಧಿಗಳು ಎಂದು ಪ್ರತಿಪಾದಿಸಿದರು
ಮುಂದಿನ ಮೂರುವರೆ ವರ್ಷದ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಆಗಲಿವೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ಕೊಡಗು ಜಿಲ್ಲೆಯಲ್ಲಿಯೂ ಬಡವರು ಇದ್ದಾರೆ. ಎಲ್ಲಾ ಜನರ ಅಭಿವೃದ್ಧಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಪಂದಿಸಲಿದ್ದಾರೆ. ಪ್ರಮುಖವಾಗಿ ವಿದ್ಯುತ್, ರಸ್ತೆ ಮತ್ತಿತ್ತರ ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಹೇಶ್ ನಾಚಯ್ಯ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಎಂ.ಎ.ಪೊನ್ನಪ್ಪ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್, ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ, ಎಇಇ ಗೋಕುಲ, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರು ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.