ಅರಸೀಕೆರೆ ತಾಲೂಕಿನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕೆಲಸಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಗ್ರಾಮವನ್ನು ಕಡೆಗಣಿಸದೆ, ಜನರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ತಾಲೂಕನ್ನು ಅಭಿವೃದ್ಧಿಯ ದೃಷ್ಟಿಯಿಂದ ಮಾದರಿಯನ್ನಾಗಿ ಮಾಡುವುದು ನನ್ನ ಕೈಯಲ್ಲಿದ್ದು, ಅದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಸಮಗ್ರ ಅಭಿವೃದ್ಧಿಯೊಂದಿಗೆ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ತಾಲೂಕನ್ನು ಮಾದರಿ ತಾಲೂಕನ್ನಾಗಿ ರೂಪಿಸುವ ಗುರಿ ಹೊಂದಿದ್ದೇನೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ತಿಳಿಸಿದರು.ತಾಲೂಕಿನ ಕಸಬಾ ಹೋಬಳಿಯ ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ಶಂಕರನಹಳ್ಳಿಯಿಂದ ದಾಸಿಹಳ್ಳಿ ಗ್ರಾಮದವರೆಗೆ 70 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕೆಲಸಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಗ್ರಾಮವನ್ನು ಕಡೆಗಣಿಸದೆ, ಜನರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ತಾಲೂಕನ್ನು ಅಭಿವೃದ್ಧಿಯ ದೃಷ್ಟಿಯಿಂದ ಮಾದರಿಯನ್ನಾಗಿ ಮಾಡುವುದು ನನ್ನ ಕೈಯಲ್ಲಿದ್ದು, ಅದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವಿಶೇಷ ಗಮನ ಹರಿಸಲಾಗಿದ್ದು, ನೀರಿನ ವಿಚಾರದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಭರವಸೆ ನೀಡಿದರು.ಅದೇ ರೀತಿ ತಾಲೂಕಿನ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಾಣಾವರ ಭಾಗಕ್ಕೆ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹಾಗೂ ಕಣಕಟ್ಟೆ ಮತ್ತು ಗಂಡಸಿ ಭಾಗಗಳಿಗೆ ಹೇಮಾವತಿ ಬರುತಿದ್ದು, ಈ ಯೋಜನೆಗಳಿಂದ ಕೃಷಿಗೆ ಅನುಕೂಲವಾಗುವುದರ ಜೊತೆಗೆ ರೈತರ ಬದುಕಿನಲ್ಲಿಯೂ ಬದಲಾವಣೆ ತರಲು ಸಾಧ್ಯವಾಗಲಿದೆ. ತಾಲೂಕಿನ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.