ಅವಶ್ಯಕತೆಯಂತೆ ಬೀಜ, ಗೊಬ್ಬರ ಸಂಗ್ರಹವಿದೆ

KannadaprabhaNewsNetwork |  
Published : May 30, 2026, 02:45 AM IST
ಬೀಜ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಹುಕ್ಕೇರಿ ರೈತರು ಭೂಮಿ ತೇವಾಂಶ ನೋಡಿಕೊಂಡು ಮುಂಗಾರು ಬಿತ್ತನೆ ಪ್ರಾರಂಭಿಸಬೇಕು. ಕೃಷಿ ಇಲಾಖೆಯು ಬಿತ್ತನೆಗೆ ಬೇಕಾದ ಅಗತ್ಯ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿರೈತರು ಭೂಮಿ ತೇವಾಂಶ ನೋಡಿಕೊಂಡು ಮುಂಗಾರು ಬಿತ್ತನೆ ಪ್ರಾರಂಭಿಸಬೇಕು. ಕೃಷಿ ಇಲಾಖೆಯು ಬಿತ್ತನೆಗೆ ಬೇಕಾದ ಅಗತ್ಯ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.

ಪಟ್ಟಣದ ಹೊರವಲಯದ ಕೃಷಿ ಇಲಾಖೆ ಆವರಣದಲ್ಲಿ ಶುಕ್ರವಾರ ರೈತರಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಬೀಜ ಮತ್ತು ಗೊಬ್ಬರ ಸಂಗ್ರಹವಿದೆ. ಹುಕ್ಕೇರಿ, ಸಂಕೇಶ್ವರ ಮತ್ತು ಯಮಕನಮರಡಿ ರೈತ ಸಂಪರ್ಕ ಕೇಂದ್ರ ಮತ್ತು 37 ಪಿಕೆಪಿಎಸ್‌ಗಳಲ್ಲಿ ಬೀಜ, ಗೊಬ್ಬರ ವಿತರಿಸಲಾಗುತ್ತಿದೆ. ಬೀಜ, ಗೊಬ್ಬರ ವಿತರಣೆಯಲ್ಲಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರೈತರು ಕೃಷಿ ಇಲಾಖೆಗೆ ಅಗತ್ಯ ದಾಖಲಾತಿ ಸಲ್ಲಿಸಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ರಾಮಚಂದ್ರ ನಾಯ್ಕರ ಮಾತನಾಡಿ, ಈಗಾಗಲೇ ಯೂರಿಯಾ ಸೇರಿ ವಿವಿಧ ರೀತಿಯ 8000 ಮೆಟ್ರಿಕ್ ಟನ್ ಗೊಬ್ಬರವನ್ನು ದಾಸ್ತಾನು ಮಾಡಲಾಗಿದೆ. ಜೊತೆಗೆ 7500 ಕ್ವಿಂಟಲ್ ಸೋಯಾಬಿನ್, ಮೆಕ್ಕೆಜೋಳ 18 ಕ್ವಿಂಟಲ್ ಬೀಜ ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಎಂದರು.ಮುಖಂಡರಾದ ಸತ್ಯಪ್ಪಾ ನಾಯಿಕ, ಎ.ಕೆ.ಪಾಟೀಲ, ಗುರು ಕುಲಕರ್ಣಿ, ರಾಜು ಮುನ್ನೋಳಿ, ಮಹಾಂತೇಶ ತಳವಾರ, ಶಿವನಗೌಡ ಪಾಟೀಲ, ಆನಂದ ಲಕ್ಕುಂಡಿ, ಚನ್ನಪ್ಪ ಗಜಬರ, ಯಲ್ಲಪ್ಪ ಡಪ್ಪರಿ, ಬಸವರಾಜ ಪಾಟೀಲ, ಗಿರೀಶ ಕುಲಕರ್ಣಿ, ರಾಜು ಚೌಗಲಾ, ಅಧಿಕಾರಿಗಳಾದ ಶಿವಾನಂದ ಕಮತ, ಉದಯ ಆಗನೂರ, ತಾಂತ್ರಿಕ ಅಧಿಕಾರಿ ರಾಘವೇಂದ್ರ ತಳವಾರ, ಸಿಬ್ಬಂದಿಗಳಾದ ಸಮೀರ ಲೋಕಾಪುರ, ಅಜೀತ ಹೂಲಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದುಗ್ಗಹಳ್ಳಿಯಲ್ಲಿ ಅದ್ಧೂರಿ ಬಸವ ಜಯಂತಿ ಆಚರಣೆ
ಸಾಮಾಜಿಕ ಕ್ಷೇತ್ರಕ್ಕೆ ಅಮ್ಮನ ಕೊಡುಗೆ ಅಪಾರ: ಪ್ರಲ್ಹಾದ್ ಜೋಶಿ