)
ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯರ ಸಂಘ ಮತ್ತು ಎರಡೂ ಇಲಾಖಾ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಶೀಘ್ರ ಮತ್ತೊಂದು ಸುತ್ತಿನ ಸಭೆ ಕರೆದು ಮಾತನಾಡಲು, ವಸ್ತುಸ್ಥಿತಿ ವಿವರಿಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ಮಾಡಲು ಸಂಪುಟ ಅನುಮತಿ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಕಾಯಂ, ಗುತ್ತಿಗೆ ಆಥವಾ ತಾತ್ಕಾಲಿಕ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಅಧಿಕಾರಿಗಳ ಸೇವೆಯನ್ನು ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ರಡಿ(ಎಸ್ಮಾ) ಅಧಿಸೂಚಿಸುವ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಆದರೆ, ಅಧಿಸೂಚಿಸುವ ಬದಲು ವೈದ್ಯರು ಮತ್ತು ವೈದ್ಯ ಸಿಬ್ಬಂದಿ, ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಆರೋಗ್ಯ ಸಚಿವರು ಮತ್ತೊಂದು ಸುತ್ತಿನ ಸಭೆ ನಡೆಸಿ ಮುಷ್ಕರ ನಡೆಸದಂತೆ ಮನವೊಲಿಸುವ ಪ್ರಯತ್ನ ನಡೆಸಬೇಕೆಂದು ಸಭೆ ತೀರ್ಮಾನಿಸಿದೆ ಎಂದರು.ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು, ಔಷಧ ಕೊರತೆ ನೀಗಿಸಬೇಕು, ಜೇಷ್ಠತಾ ಪಟ್ಟಿ ಪರಿಷ್ಕರಣೆ ಮಾಡಬೇಕು, ಕಾಲಾಕಾಲಕ್ಕೆ ಬಡ್ತಿ ನೀಡಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿನ ಕರ್ತವ್ಯ ಅವಧಿಯ ನಂತರ ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವಾಗ ಒಳರೋಗಿಗಳಿಗೆ ಚಿಕಿತ್ಸೆ ನೀಡಬಾರದೆಂಬ ಆದೇಶ ಹಿಂಪಡೆಯಬೇಕು, ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು, ಅಮಾನವೀಯ ವರ್ಗಾವಣೆ ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ವೈದ್ಯರು ಮತ್ತು ಸಿಬ್ಬಂದಿ ಮಾ.11ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ.