ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರುಗಳು ಬಂದಿರುವುದಿಲ್ಲ. ಒಂದು ವೇಳೆ ದೂರುಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದ ಅವರು, ನೀರಿನ ಪೈಪ್ ಲೈನ್ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.ಅಂತರ್ಜಲ ಮಟ್ಟ ಕಡಿಮೆಯಾಗುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಮುದ್ರದ ಉಪ್ಪು ನೀರು ನದಿಯ ಸಿಹಿ ನೀರಿಗೆ ಸೇರದಂತೆ ಈಗಾಗಲೇ ಜಿಲ್ಲೆಯಲ್ಲಿರುವ ಎಲ್ಲ 666 ಕಿಂಡಿ ಆಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಲಾಗಿದೆ ಎಂದ ಅವರು, ಬತ್ತಿಹೋಗಿರುವ ಸರ್ಕಾರಿ ಬಾವಿಗಳಿಗೂ ಸಹ ಮಳೆ ನೀರಿನ ಕೊಯ್ಲನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ. ಖಾತೆಯಲ್ಲಿ 10.15 ಕೋಟಿ ರು. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಸೀಲ್ದಾರ್ ವಿಪತ್ತು ಪಿ.ಡಿ. ಖಾತೆಯಲ್ಲಿ 1.53 ಕೋಟಿ ರು. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಯಾವುದೇ ಕೊರತೆ ಇರುವುದಿಲ್ಲ ಎಂದರು.ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ. ನಾಯಕ್, ಸಹಾಯಕ ಕಮೀಷನರ್ ಮಹೇಶ್ಚಂದ್ರ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ತಾಲೂಕುಗಳ ತಹಸೀಲ್ದಾರ್‌ಗಳು, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.