ಬರ ಎದುರಾಗುತ್ತಿದ್ದರೂ ಕೃಷಿ ಸಚಿವರಿಲ್ಲ: ಬೊಮ್ಮಾಯಿ

KannadaprabhaNewsNetwork |  
Published : Jun 28, 2026, 03:15 AM IST
ಬಸವರಾಜ ಬೊಮ್ಮಾಯಿ | Kannada Prabha

ಸಾರಾಂಶ

ರಾಜ್ಯದಲ್ಲಿ ಈ ವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ.

ಹುಬ್ಬಳ್ಳಿ:

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸಬೇಕು ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ವರೆಗೂ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟಕರ ಎಂದು ಟೀಕಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕಿದ್ದು, ಎಲ್ಲ ಜಿಲ್ಲಾಧಿಕಾರಿ ಸಭೆ ನಡೆಸಿ ವಾಸ್ತವ ಸ್ಥಿತಿಯ ವರದಿ ಪಡೆಯಬೇಕು. ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಹಣ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದರು.ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಮರ್ಪಕ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟಕರ ಎಂದ ಬೊಮ್ಮಾಯಿ, ಎರಡು ಅಥವಾ ಮೂರು ಜಿಲ್ಲೆಗಳಿಗೆ ಒಬ್ಬ ಸಚಿವರನ್ನು ನೇಮಿಸಿರುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚರಂಡಿ ಸಮಸ್ಯೆಗೆ ರಸ್ತೆ ತಡೆ ಪ್ರತಿಭಟನೆ
ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ, ತಪಾಸಣೆ ನಡೆಸಿದ ಪೊಲೀಸರು