ರಕ್ತದಾನ ಶಿಬಿರ
ರಕ್ತಕ್ಕೆ ಯಾವುದೆ ಪರ್ಯಾಯ ವ್ಯವಸ್ಥೆ ಇಲ್ಲ. ರಕ್ತದಾನ ಮಾಡುವುದರಿಂದ ಹೃದಯಾಘಾತ, ಕ್ಯಾನ್ಸರ್ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮ ತಿಳಿಸಿದರು.
ಪಟ್ಟಣದ ತಾಲೂಕು ಆರೋಗ್ಯಧಿಕಾರಿಗಳ ಕಚೇರಿ, ಆಟೋ ಚಾಲಕರ ಸಂಘ ಮತ್ತು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ರಕ್ತ ಕಣಗಳಲ್ಲಿ ಕಬ್ಬಿಣಾಂಶವನ್ನು ಕಡಿಮೆ ಮಾಡುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಬರುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಸಂಶೋಧನೆ ತಿಳಿಸಿದೆ. ನಿಯಮಿತ ರಕ್ತದಾನವು ಹೃದಯ ರಕ್ತನಾಳದ ಆರೋಗ್ಯ ಅಪಾಯವನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಮಾಡುತ್ತದೆ. ಉತ್ತಮ ರಕ್ತದ ಹರಿವನ್ನು ಉತ್ತೇಜಿಸುತ್ತದೆ. ರಕ್ತದ ಹರಿವು ಉತ್ತಮವಾದಾಗ, ಅದು ರಕ್ತ ಹೆಪ್ಪುಗಟ್ಟುವಕೆಯ ರಚನೆಯನ್ನು ತಡೆಯುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ ೨೫ ವ್ಯಕ್ತಿಗಳು ರಕ್ತದಾನ ಮಾಡಿದರು. ಹಾಸನ ರಕ್ತನಿದಿ ಕೇಂದ್ರ ವೈದ್ಯೆ ಡಾ.ನಾಗಲಕ್ಷ್ಮಿ, ಹಿರಿಯ ಪ್ರಯೋಗ ಶಾಖಾ ತಂತ್ರಜ್ಞ ಅಶ್ವಥ್, ಕೆ. ಎನ್. ಸುಪ್ರಿಯ, ಥ್ಲೂಲ್ಲೂಕು ಆರೋಗ್ಯ ಇಲಾಖೆ ಕಚೇರಿ ಸಿಬ್ಬಂದಿ ಮೋಹನ್, ಶ್ವೇತಾ, ಪಲ್ಲವಿ ಭಾಗವಹಿಸಿದ್ದರು.