ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವುದೇ ವ್ಯತ್ಯಾಸವಿಲ್ಲ

KannadaprabhaNewsNetwork |  
Published : Apr 27, 2025, 01:51 AM IST
ಫೋಟೋ ಅರವಿಂದ ಬೆಲ್ಲದ | Kannada Prabha

ಸಾರಾಂಶ

ಉಗ್ರ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನವನ್ನು ಬಗ್ಗು ಬಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತದೆ. ಭಾರತದ ಹಿತದೃಷ್ಟಿಯಿಂದ ಯಾವ ರೀತಿ ಮಟ್ಟಹಾಕಬೇಕು ಆ ಕೆಲಸಗಳಾಗುತ್ತವೆ. ಯಾವುದು ಸರಿ? ಯಾವುದು ತಪ್ಪು‌ ಎಂಬುದರ ಕುರಿತು ಪ್ರಧಾನಿ ಮೋದಿ ನಿರ್ಧಾರ ತೆಗೆದುಕೊಳ್ಳುತ್ತಾರೆ.

ಹುಬ್ಬಳ್ಳಿ:

ಪಾಕಿಸ್ತಾನದ ಜತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಾಧಾರಿತ ದಾಳಿ ಇದಲ್ಲ. ಪಾಕಿಸ್ತಾನದ ವಿರುದ್ಧ ಯುದ್ಧದ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಅವರ ಈ ಹೇಳಿಕೆ ಬಾಲಿಶತನದಿಂದ ಕೂಡಿದೆ. ಇದು ಅವರಿಗೆ ಶೋಭೆ ತರುವುದಿಲ್ಲ. ಮುಸ್ಲಿಂರ ಓಲೈಕೆ, ಮತಬ್ಯಾಂಕ್ ರಾಜಕೀಯಕ್ಕಾಗಿ ಈ ರೀತಿ ಹೇಳಿಕೆ ನೀಡಬಾರದು. ಖರ್ಗೆಯವರೂ ಇಂತಹ ಹೇಳಿಕೆ ನೀಡಬಾರದು ಎಂದರು.

ಉಗ್ರ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನವನ್ನು ಬಗ್ಗು ಬಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತದೆ. ಭಾರತದ ಹಿತದೃಷ್ಟಿಯಿಂದ ಯಾವ ರೀತಿ ಮಟ್ಟಹಾಕಬೇಕು ಆ ಕೆಲಸಗಳಾಗುತ್ತವೆ. ಯಾವುದು ಸರಿ? ಯಾವುದು ತಪ್ಪು‌ ಎಂಬುದರ ಕುರಿತು ಪ್ರಧಾನಿ ಮೋದಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ಈ ಹಿಂದೆ ರಾಜ್ಯಭಾರ ಮಾಡಿದ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಲ್ಲಿ ಯಾವ ಪರಿಸ್ಥಿತಿ ಇತ್ತು? ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಯಾವ ಪರಿಸ್ಥಿತಿ ಇದೆ ಎಂಬುದನ್ನು ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು. ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದಿಂದ ಭದ್ರತಾ ಲೋಪವಾಗಿದೆ ಎಂಬ ಕಾಂಗ್ರಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ರಾಷ್ಟ್ರದ ಸುರಕ್ಷತೆ ವಿಚಾರದಲ್ಲಿ ಅವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!