ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ: ಶಾಸಕ ಕೆ.ಎಂ. ಉದಯ್

KannadaprabhaNewsNetwork |  
Published : Apr 20, 2025, 01:52 AM IST
19ಕೆಎಂಎನ್ ಡಿ24 | Kannada Prabha

ಸಾರಾಂಶ

ಬಿಜೆಪಿ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಗೆ ಹೆಚ್ಚಿನ ಸವಲತ್ತು ನೀಡಿ ನಮಗೆ ಅಲ್ಪ ಸ್ವಲ್ಪ ಸವಲತ್ತು ನೀಡಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಎಷ್ಟು ಸರಿ ಈ ಬಗ್ಗೆ ಬಿಜೆಪಿ ಪಕ್ಷದವರು ಆತ್ಮವಲೋಕನ ಮಾಡಿ ಕೊಳ್ಳಲಿ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಬೇಕೆಂಬುದು ನಮ್ಮೆಲ್ಲರ ಒಕ್ಕೊರಲಿನ ಅಭಿಪ್ರಾಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷ ಜಾತಿಗಣತಿ ಮಾಡಿದ್ದು, ಈಗ ಮತ್ತೆ ಪರಿಶೀಲನೆ ಮಾಡಬೇಕು ಎಂಬುದು ನಮ್ಮ ಅಭಿಪ್ರಾಯ. ಈ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಜಾತಿ ಗಣತಿ ವಿಚಾರದಲ್ಲಿ ನನ್ನ ವೈಯುಕ್ತಿಕ ಅಭಿಪ್ರಾಯ ಏನು ಇಲ್ಲ. ನಮ್ಮ ಪಕ್ಷದ ಹಿರಿಯ ಮುಖಂಡರು, ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಅದಕ್ಕೆ ನಾವು ಬದ್ಧರಾಗುತ್ತೇವೆ ಎಂದರು.

ನಾವು ಬಿಜೆಪಿ ವಿರುದ್ಧ ಪ್ರತಿಭಟಿಸುತ್ತಿಲ್ಲ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಕಾಂಗ್ರೆಸ್ ಕೆಲ ಶಾಸಕರ ವಿರುದ್ಧ ಸುಖಾಸುಮ್ಮನೆ ಇಡಿ, ಸಿಬಿಐ ಬಳಸಿಕೊಂಡು ಅಪಪ್ರಚಾರ ಮಾಡುತ್ತಾ ಹೆದರಿಸುತ್ತಿದ್ದಾರೆ. ಅದರ ವಿರುದ್ಧ ಪ್ರತಿಭಟಿಸುತ್ತಿರುವುದಾಗಿ ತಿಳಿಸಿದರು.

ಯಾವುದೇ ಸರ್ಕಾರ ಬಂದರೂ ಒಂದು ಜಾತಿ ಪರವಾಗಿ ನಿಲ್ಲಲ್ಲ. ಎಲ್ಲಾ ಸಮಾಜದವರು ಒಂದೇ. ಹಿಂದುಳಿದ ವರ್ಗದವರಿಗೆ ಸವಲತ್ತು ಕೊಡುವುದು ತಪ್ಪೇನಿಲ್ಲ? ಬಿಜೆಪಿ ಪಕ್ಷದವರು ಸಹ ಮುಸ್ಲಿಂ ಒಲೈಕೆಗೆ ಹಲವು ಕಸರತ್ತು ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕೇಂದ್ರದವರೂ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸಿದರೆ ನಮ್ಮ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲ. ನಮ್ಮ ಸರ್ಕಾರ ಕೇಂದ್ರಕ್ಕೆ ಕಟ್ಟುತ್ತಿರುವ ಜಿಎಸ್ಟಿ ಹಣ ವಾಪಸ್ ಕೊಟ್ಟರೇ ಸಾಕು ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಗೆ ಹೆಚ್ಚಿನ ಸವಲತ್ತು ನೀಡಿ ನಮಗೆ ಅಲ್ಪ ಸ್ವಲ್ಪ ಸವಲತ್ತು ನೀಡಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಎಷ್ಟು ಸರಿ ಈ ಬಗ್ಗೆ ಬಿಜೆಪಿ ಪಕ್ಷದವರು ಆತ್ಮವಲೋಕನ ಮಾಡಿ ಕೊಳ್ಳಲಿ ಎಂದರು.ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದೇನೆ: ಕೆ.ಎಂ.ಉದಯ್

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮದ್ದೂರು ಕ್ಷೇತ್ರ ವ್ಯಾಪ್ತಿ ಹಂತ ಹಂತವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಸುಣ್ಣದದೊಡ್ಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 29 ಲಕ್ಷ ರು. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಹಲವು ಶಾಲೆಗಳಲ್ಲಿ ಕೊಠಡಿಗಳ ಕೊರತೆ ಇದೆ. ಸುಣ್ಣದದೊಡ್ಡಿ ಬಿದರಹೊಸಹಳ್ಳಿ, ನವಿಲೆ, ನಿಡಘಟ್ಡ ಗ್ರಾಮಗಳಿಗೆ ತಲಾ ಎರಡು ಮೂರು ಕೊಠಡಿಗಳನ್ನು ಸರಕಾರದಿಂದ ಅನುದಾನ ತಂದು ಗುದ್ದಲಿ ಪೂಜೆ ನೆರವೇರಿಸುವುದಾಗಿ ತಿಳಿಸಿದರು.

ನಾನು ಶಾಸಕನಾಗುವುದಕ್ಕಿಂತ ಮೊದಲು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ ಹಲವು ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಪಠ್ಯ ಪರಿಕರಗಳನ್ನು ವಿತರಿಸಿದ್ದೇನೆ. ಈ ವೇಳೆ ಶಾಲೆಗಳು ದುಸ್ಥಿತಿಯಲ್ಲಿರುವುದನ್ನು ಗಮನಿಸಿದ್ದು ಬಳಿಕ ಗ್ರಾಮಗಳಿಗೆ ಭೇಟಿ ವೇಳೆಯು ಗ್ರಾಮಸ್ಥರು ನನಗೆ ಮನವಿ ಮಾಡಿದ್ದಾರೆ. ಅವರ ಮನವಿಗೆ ಸ್ಪಂದಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದೆನೆ ಎಂದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ್, ಶಿಕ್ಷಣ ಸಂಯೋಜಕ ಲೋಕೇಶ್, ಸಿ ಆರ್ ಪಿ ನಂದೀಶ್, ತಾಲೂಕು ಕೆಡಿಪಿ ಸದಸ್ಯ ಅಭೀಷೆಕ್, ಮುಖಂಡರಾದ ಪೈಂಟ್ ಮಹೇಶ್, ಎಸ್.ಬಿ.ಯೋಗೇಶ್, ಬಸವಲಿಂಗೇಗೌಡ, ಜಯಲಿಂಗ, ಎಸ್. ಲಿಂಗಯ್ಯ, ರಾಮಲಿಂಗಯ್ಯ, ರಾಜಣ್ಣ ಸೇರಿದಂತೆ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ