- ಸ್ವಚ್ಛತೆಯೇ ಸೇವಾ ಕಾರ್ಯಕ್ರಮ ಸಮಾರೋಪದಲ್ಲಿ ಶಾಸಕ ಬಿ.ದೇವೇಂದ್ರಪ್ಪ - - - ಕನ್ನಡಪ್ರಭ ವಾರ್ತೆ ಜಗಳೂರು
ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದಗುಡ್ಡ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಬುಧವಾರ ಸ್ವಚ್ಛತೆಯೇ ಸೇವಾ ಕಾರ್ಯಕ್ರಮ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಲಕ್ಷಾಂತರ ಭಕ್ತರು ಬರುವ ಕೊಡದಗುಡ್ಡದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಮತ್ತು ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ತಾರತಮ್ಯವಿಲ್ಲದೇ ಅನುದಾನ ನೀಡಲು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.
ಇತ್ತೀಚಿನ ದಿನಗಳಲ್ಲಿ ಬಾಲ್ಯವಿವಾಹ ಕಾಯ್ದೆಗೆ ತಿದ್ದುಪಡಿಯಾಗಿದ್ದು, ಕಾಯ್ದೆ ಉಲ್ಲಂಘಿಸಿದರಿಗೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವುದು ಸಂತೋಷ ಎಂದರು.ಗ್ರಾಪಂ ಸದಸ್ಯ ಬಸವಾಪುರ ರವಿಚಂದ್ರ ಅವರು ವೀರಭದ್ರೇಶ್ವರ ಸನ್ನಿಧಾನದಲ್ಲಿ ಭಕ್ತಾದಿಗಳಿಗಾಗಿ ಹೈಟೆಕ್ ಶೌಚಾಲಯ ನಿರ್ಮಾಣ ವಿಳಂಬ ಆಗಿರುವ ಬಗ್ಗೆ ಕಾರ್ಯಕ್ರಮದಲ್ಲಿ ಗಮನ ಸೆಳೆದಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಕಾಮಗಾರಿ ಏಕೆ ವಿಳಂಬವಾಗಿದೆ ಎಂಬುದನ್ನು ಅಧಿಕಾರಿಗಳ ಸಮಕ್ಷಮ ಚರ್ಚಿಸಿ, ಆದಷ್ಟು ಬೇಗ ಶೌಚಾಲಯ ನಿರ್ಮಾಣ ಮತ್ತು ಅಂಗನವಾಡಿ ಕಟ್ಟಡಗಳ ಲೋಕಾರ್ಪಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ದೇವಿಕೆರೆ ಗ್ರಾಪಂ ಸದಸ್ಯ ಗುರುಸ್ವಾಮಿ ಮತ್ತು ಬಸವಾಪುರ ರವಿಚಂದ್ರ ಶಾಸಕರಲ್ಲಿ ಗ್ರಾಪಂ ಅಭಿವೃದ್ಧಿಗೆ ಬೇಕಾದ ಅನುದಾನದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.
- - - -2ಜೆಎಲ್ಆರ್ಚಿತ್ರ1:
ಸಮಾರೋಪ ಸಮಾರಂಭಕ್ಕೆ ಶಾಸಕ ಬಿ.ದೇವೇಂದ್ರಪ್ಪ ಚಾಲನೆ ನೀಡಿದರು.