ಮೂಡುಬಿದಿರೆ: ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ (ನಮೂನೆ 50, 53, 57 ಅರ್ಜಿಗಳ ವಿಲೇವಾರಿ) ವಿಚಾರದಲ್ಲಿ ಯಾವುದೇ ಲೋಪವಾಗಿಲ್ಲ. ರಾಜಕೀಯ ಕಾರಣಗಳಿಗಾಗಿ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯರು ಮತ್ತು ಅನುಭವಿಗಳಾಗಿರುವ ವಾಸುದೇವ ನಾಯಕ್ ಅವರು ಯಾವ ಕಾರಣಕ್ಕೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ವಿವಿಧ ಅರ್ಜಿಗಳ ವಿಲೇವಾರಿ ವಿಧಾನವು ತಾಂತ್ರಿಕವಾಗಿ ವಿವಿಧ ನಿಯಮಗಳ ಅಡಿಯಲ್ಲಿ ಹಲವು ಹಂತಗಳಲ್ಲಿ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಅಥವಾ ಲೋಪವಾಗಿಲ್ಲ ಎಂದು ಶಾಸಕರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ವಕೀಲರಾದ ಬಾಹುಬಲಿ ಪ್ರಸಾದ್, ಶಾಂತಿ ಪ್ರಸಾದ್ ಹೆಗ್ಡೆ, ಪ್ರಮುಖರಾದ ಸುಕೇಶ್ ಶೆಟ್ಟಿ ಲಕ್ಷ್ಮಣ್ ಪೂಜಾರಿ, ಗೋಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.