ಪ್ರತ್ಯೇಕ ರಾಜ್ಯದ ಅಗತ್ಯವಿಲ್ಲ

KannadaprabhaNewsNetwork |  
Published : Nov 30, 2024, 12:45 AM IST
ಅಥಣಿ ಪುರಸಭೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿಗಳ 51 ಕಾಮಗಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ರಾಜ್ಯ ಸರ್ಕಾರ ವಿಶೇಷ ಅನುದಾನ ಒದಗಿಸಬೇಕೆಂಬುವುದು ಈ ಭಾಗದ ಶಾಸಕರ ಒತ್ತಾಸೆಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ರಾಜ್ಯ ಸರ್ಕಾರ ವಿಶೇಷ ಅನುದಾನ ಒದಗಿಸಬೇಕೆಂಬುವುದು ಈ ಭಾಗದ ಶಾಸಕರ ಒತ್ತಾಸೆಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಪುರಸಭೆ ವತಿಯಿಂದ ಗುರುವಾರ 2024-25ನೇ ಸಾಲಿನ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿಗಳ 51 ಕಾಮಗಾರಿಗಳ ಭೂಮಿಪೂಜಾ ಕಾರ್ಯಕ್ರಮ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬರುವ ಚಳಿಗಾಲ ಅಧಿವೇಶನದಲ್ಲಿ ಪ್ರತ್ಯೇಕ ರಾಜ್ಯದ ಕೂಗಿಗೆ ಅಂತ್ಯಹಾಡಿ, ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತುವೆ ಎಂದು ಭರವಸೆ ನೀಡಿದರು.ಅಥಣಿ ಪಟ್ಟಣವನ್ನು ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗುತ್ತಿದೆ. ಜೋಡಿಕೆರೆಗಳ ಅಭಿವೃದ್ಧಿ, ಭಾಗೀರಥಿ ನಾಲಾ ಅಭಿವೃದ್ಧಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಲಿ, ಉಪಾಧ್ಯಕ್ಷೆ ಭುವನೇಶ್ವರಿ ಬೀ.ಯಕ್ಕಂಚಿ, ಪುರಸಭೆ ಮುಖ್ಯಧಿಕಾರಿ ಪುರಸಭೆ ಸದಸ್ಯರಾದ ರಾವಸಾಬ್‌ ಐಹೊಳೆ, ಮಲ್ಲಿಕಾರ್ಜುನ ಬೂಟಾಳಿ, ಪ್ರಮೋದ ಬೀಳೂರ, ರಾಜಶೇಖರ ಗುಡ್ಡೋಡಗಿ, ಬಸವರಾಜ ನಾಯಿಕ ಸೇರಿದಂತೆ ಪುರಸಭೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.ಕಿತ್ತೂರು ಕರ್ನಾಟಕ ಭಾಗವು ಹಿಂದಿನ ಮುಂಬೈ ಕರ್ನಾಟಕ ಭಾಗವಾಗಿದ್ದು, ಇದು ಕೂಡ ಹಿಂದುಳಿದ ಭಾಗವಾಗಿದೆ. ಕಲ್ಯಾಣ ಕರ್ನಾಟಕ ಮಂಡಳಿಯನ್ನು ಸ್ಥಾಪಿಸುವ ಮೂಲಕ ಹೈದರಾಬಾದ್ ಕರ್ನಾಟಕಕ್ಕೆ ವಿಶಿಷ್ಟ ಸ್ಥಾನಮಾನ ನೀಡಿದಂತೆ ಕಿತ್ತೂರು ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಅಗತ್ಯವಿದೆ. ಈ ಮೂಲಕ ವಿಭಾಗದ ಅಭಿವೃದ್ಧಿಗೆ ಒತ್ತು ನೀಡುವ ಅವಶ್ಯಕತೆ ಇದೆ.

-ಲಕ್ಷ್ಮಣ ಸವದಿ, ಶಾಸಕರು.

PREV

Recommended Stories

ದೀಪಾವಳಿ; ರಾಜ್ಯದ ವಿವಿಧೆಡೆ ಬಿಎಂಟಿಸಿಯಿಂದ 960 ಬಸ್‌ - ಗೋವಾಗೂ ವಿಶೇಷ ರೈಲು
ಬೆಂಗಳೂರು ನಗರವೊಂದರಲ್ಲೇ 943 ಟನ್‌ ಆಹಾರ ವ್ಯರ್ಥ: ಸಿಎಂ