ಅಭಿವೃದ್ಧಿಕೆಲಸದಲ್ಲಿ ಹಿಂದೆ ಸರಿವ ಪ್ರಶ್ನೆಯೇ ಇಲ್ಲ: ಆರ್.ಬಿ. ತಿಮ್ಮಾಪೂರ

KannadaprabhaNewsNetwork |  
Published : Feb 28, 2025, 12:49 AM IST
ಮುಧೋಳ ತಾಲೂಕಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದ ಸಚಿವ ಆರ್‌.ಬಿ. ತಿಮ್ಮಾಪುರ. | Kannada Prabha

ಸಾರಾಂಶ

ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಯಾವುದೇ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ. ಮುಧೋಳ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳು ಶೂನ್ಯ ಎಂದು ಸುಖಾಸುಮ್ಮನೆ ಟೀಕೆ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ನಾನು ಏನೇನು ಅಭಿವೃದ್ಧಿ ಕೆಲಸ ಮಾಡಿರುವುದಾಗಿ ಅಂಕಿ-ಅಂಶಗಳ ಸಮೆತ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಯಾವುದೇ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ. ಮುಧೋಳ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳು ಶೂನ್ಯ ಎಂದು ಸುಖಾಸುಮ್ಮನೆ ಟೀಕೆ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ನಾನು ಏನೇನು ಅಭಿವೃದ್ಧಿ ಕೆಲಸ ಮಾಡಿರುವುದಾಗಿ ಅಂಕಿ-ಅಂಶಗಳ ಸಮೆತ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.

ಗುರುವಾರ ಸ್ಥಳೀಯ ರನ್ನ ಭವನದ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಪೂಜಾ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023-24 ಮತ್ತು 2024-25ನೇ ಸಾಲಿನಲ್ಲಿ ಮುಧೋಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು ₹3423.89 ಕೋಟಿ ಅನುದಾನದ ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಸರ್ಕಾರದ ಖಜಾನೆಯಲ್ಲಿ ದುಡ್ಡು ಇಲ್ಲದೆ ಸಾವಿರಾರು ಕೋಟಿ ಅನುದಾನದಲ್ಲಿ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದಾರೆ, ಅವರಿಗೆ ಅಂದು ದುಡ್ಡು ಕೊಡಲು ಖಜಾನೆಯಲ್ಲಿ ಹಣ ಇರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಗೆ ಹಣ ಕೊಡುತ್ತಿಲ್ಲವೆಂದು ಆರೋಪಿಸುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ಕೆಲಸಗಳಿಗೆ ಕಾಂಗ್ರೆಸ್ ಸರ್ಕಾರ ಹಣ ನೀಡಬೇಕು. ಜೊತೆಗೆ ಹೊಸ ಕಾಮಗಾರಿ ಆರಂಭಿಸಬೇಕಾಗಿದೆ ಎಂದು ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.

ಕಾಂಗ್ರೆಸ್ ಸರ್ಕಾರ ಈಗಲೂ ಅಭಿವೃದ್ಧಿ ಕೆಲಸ ಕೈಗೊಂಡಿದೆ. ಮುಂದೆಯೂ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಆದರೆ ವಿರೋಧ ಪಕ್ಷದವರು ಕಾಂಗ್ರೆಸ್ ಮೇಲೆ ಗೂಬೆ ಕೂಡ್ರಿಸುವ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಕೆಲಸದಲ್ಲಿ ಹಿಂದೆ ಸರಿಯುವ ಪ್ರಶ್ನೇಯೇ ಇಲ್ಲ ಎಂದು ಹೇಳಿದರು.

ಈ ವೇಳೆ ಮುಧೋಳ ಮತಕ್ಷೇತ್ರ ವ್ಯಾಪ್ತಿಯ ಆಲಗುಂಡಿ ಬಿ.ಕೆ, ಬುದ್ನಿ ಕೆ.ಡಿ, ಅಂತಾಪೂರ, ಜಾಲಿಬೇರ, ಮಲ್ಲಾಪೂರ ಪಿ.ಜೆ, ಮಳಲಿ, ಕುಳಲಿ, ರೂಗಿ, ಬುದ್ನಿ ಪಿ.ಎಂ, ಚೌಡಾಪೂರ, ಮಂಟೂರ, ಬರಗಿ, ಸೋರಗಾಂವ, ಹಲಗಲಿ, ಮೆಳ್ಳಿಗೇರಿ, ಉತ್ತೂರ, ಚಿತ್ರಬಾನುಕೋಟೆ, ನಾಗರಾಳ, ಚಿಂಚಖಂಡಿ ಬಿ.ಕೆ, ಮೆಟಗುಡ್ಡ, ಲಕ್ಷ್ಯಾನಟ್ಟಿ, ಬೆಳಗಲಿ, ಕಸಬಾಜಂಬಗಿ, ಶಿರೋಳ, ಜಂಬಗಿ ಕೆ.ಡಿ, ಹಲಕಿ, ಬೊಮ್ಮನಬುದ್ನಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ₹9.21 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಗುರುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಉದಯಕುಮಾರ ಸಾರವಾಡ, ವೆಂಕಣ್ಣ ಗಿಡಪ್ಪನವರ, ಮಹಾಂತೇಶ ಮಾಚಕನೂರ, ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ