ಕನ್ನಡಪ್ರಭ ವಾರ್ತೆ ವಿಜಯಪುರ
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪರಿಗೆ 82 ವರ್ಷ ವಯಸ್ಸಾಗಿದ್ದು, ಅವರು ಹಿರಿಯರು. ಯಡಿಯೂರಪ್ಪ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಅಭಿಮಾನವಿದೆ. ಅನುಕಂಪವಿದೆ. ಅವರಿಗೆ ತೊಂದರೆ ಕೊಡುವುದನ್ನು ನಾವು ಬಯಸುತ್ತೇವಾ ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಹಾಗೂ ಅವರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್ ವಿಚಾರಕ್ಕೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದ ಮುಂಭಾಗ ಮಾತನಾಡಿದ ಅವರು, ಹಾಗೊಂದು ವೇಳೆ ನಾವು ಉದ್ದೇಶಪೂರ್ವಕ ಮಾಡಿದರೆ ಅದರ ಪರಿಣಾಮಗಳ ಬಗ್ಗೆಯೂ ನಮಗೆ ಗೊತ್ತು ಎಂದರು.
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಸ್ಥಿತಿ ಏನಾಯಿತು? ಈಗಲೂ ಅವರು ಜೈಲಿನ ಒಳಗಿದ್ದಾರೆ. ಎಲ್ಲವನ್ನೂ ಕಾನೂನು ಪ್ರಕಾರ ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.ಕೋರ್ಟ್ ಆದೇಶ ಪಾಲಿಸುತ್ತೇವೆ:
ರಾಜಕೀಯ ನಿವೃತ್ತಿ:
ಸರ್ಕಾರಕ್ಕೆ ಯಾವುದೇ ಹಣದ ಕೊರತೆ ಇಲ್ಲ. ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಆರ್ಥಿಕ ತಜ್ಞರು ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ. ರಾಜಕೀಯವಾಗಿ ಗ್ಯಾರಂಟಿ ಯೋಜನೆಗಳಿಂದ ನಮ್ಮ ಪಕ್ಷಕ್ಕೆ ಅನುಕೂಲವಾಯ್ತಾ ಇಲ್ಲವಾ ಎಂಬುದನ್ನು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ಮುಖಂಡ ಮಹೇಶ ಕುಮಟಳ್ಳಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಯಾಕೆ ಭೇಟಿಯಾಗಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ. ಮಹೇಶ ಕುಮಟಳ್ಳಿ ನನಗೂ ಆತ್ಮೀಯರು. ಅವರಿಗೆ ಮೊದಲ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ನಾನೇ ಕೊಡಿಸಿದ್ದು, ಅವರ ಪುತ್ರನ ಮದುವೆಗೂ ನಾನು ಹೋಗಿದ್ದೆ. ಅವರು ವಿಜಯಪುರಕ್ಕೆ ಬಂದಾಗ ನಮ್ಮ ಮನೆಗೆ ಬರುತ್ತಾರೆ. ಜಾರಕಿಹೊಳಿ ಹಾಗೂ ಕುಮಟಳ್ಳಿ ಯಾಕೆ ಭೇಟಿಯಾಗಿದ್ದಾರೆಂದು ಅವರನ್ನೇ ಕೇಳಬೇಕು ಎಂದರು.ಅವರ ಭೇಟಿಯ ಕುರಿತು ನನಗೆ ಗೊತ್ತಿಲ್ಲ. ನನಗೆ ಬಹಳ ಜನರು ಭೇಟಿಯಾಗುತ್ತಾರೆ. ಸಚಿವನಾಗಿರುವ ಕಾರಣ ಬಿಜೆಪಿ ಶಾಸಕರು ಬಂದು ಭೇಟಿಯಾಗುತ್ತಾರೆ. ಕರೆ ಮಾಡುತ್ತಾರೆ. ನಮ್ಮ ಮನೆಗೆ ಬರುತ್ತಾರೆ ನಾವು ಅವರ ಮನೆಗೆ ಹೋಗುತ್ತೇವೆ. ಕುಮಟಳ್ಳಿ ಬೇರೆ ಜಿಲ್ಲೆಯವರಾ ಅಥಣಿಯವರು. ಮೊದಲು ನಮ್ಮ ಪಕ್ಷದಲ್ಲಿದ್ದವರು ಅವರು ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗುವುದರಲ್ಲಿ ತಪ್ಪೇನಿದೆ?. ಕುಮಟಳ್ಳಿ ಕಾಂಗ್ರೆಸ್‌ಗೆ ಬರುತ್ತಾರೋ ಹೋಗುತ್ತಾರೋ ಜಾರಕಿಹೊಳಿ ಹಾಗೂ ಅವರಿಗೆ ಗೊತ್ತು ಎಂದರು.
ಅಭಿವೃದ್ಧಿಗೆ, ಗ್ಯಾರಂಟಿಗೆ ಹಣ ಬೇಕಲ್ಲ?: ಸಚಿವ ಎಂಬಿಪಾ
ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದರೂ ಅವುಗಳ ಬೆಲೆ ಉಳಿದ ರಾಜ್ಯಗಳಿಗಿಂತ ನಮ್ಮಲ್ಲಿ ಕಡಿಮೆ ಇದೆ. ನಾವು ತೈಲ ಬೆಲೆ ಎಷ್ಟೇ ಏರಿಕೆ ಮಾಡಿದರು ಅದು ಉಳಿದ ರಾಜ್ಯಗಳಿಗಿಂತ ಕಡಿಮೆ ಇದೆ. ಅಭಿವೃದ್ಧಿ ಜನರಿಗಾಗಿಯೇ ಮಾಡುವುದಲ್ಲವೇ? ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಉಳಿದ ರಾಜ್ಯಗಳಿಗಿಂತ ಹೆಚ್ಚಿಗೆ ಇದ್ದರೆ ಕೇಳಿ. ತೈಲ ಬೆಲೆಗಳನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿದ್ದಾಗ ಗ್ಯಾಸ್ ಬೆಲೆ ₹440 ಇತ್ತು. ಬಿಜೆಪಿ ಸರ್ಕಾರದಲ್ಲಿ ₹1100 ಆಗಿದೆ ಎಂದರು.