ಕನ್ನಡಪ್ರಭ ವಾರ್ತೆ ಚಾಮರಾಜನಗರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.
ನನಗೆ ಬಿಜೆಪಿ ಅನೇಕ ಹುದ್ದೆಗಳನ್ನು ನೀಡಿದೆ. ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿತು. ಸಮುದಾಯಕ್ಕೂ ಅನೇಕ ಕೊಡುಗೆಗಳನ್ನು ನೀಡಿದೆ ಬಿಜೆಪಿಯ ಉಪ್ಪಿನ ಋಣ ಸಮುದಾಯದ ಮೇಲಿದೆ.ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದರು.ಗುಂಡ್ಲುಪೇಟೆ ಮಲ್ಲೇಶ್ ಮಾತನಾಡಿ, ಕೆಲ್ಲಂಬಳ್ಳಿ ಸೋಮನಾಯಕ ಅವರಿಗೆ ಟೀಕೆ ಮಾಡುವುದನ್ನೇ ಒಂದು ಚಟವಾಗಿಸಿ ಕೊಂಡಿದ್ದಾರೆ. ಅವರಿಗೆ ಬಿಜೆಪಿ ಹನೂರಿನಿಂದ ಟಿಕೆಟ್ ನೀಡಿತ್ತು. ನಮ್ಮ ಜನಾಂಗದವರು ಪ್ರಾಬಲ್ಯ ಇರುವ ಅಲ್ಲಿ ಎಷ್ಟು ಮತ ಪಡೆದರು. ನಾವು ಪಕ್ಷದಲ್ಲಿರುವುದು ಇವರಿಗೆ ಇಷ್ಟವಿಲ್ಲವೇ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಸುರೇಶ್, ಕಪಿನಿನಾಯಕ ಹಾಜರಿದ್ದರು.